Advertisement
ಸಂಪೂರ್ಣ ಡಾಮರೀಕರಣಕ್ಕೆ ಅನುದಾನದ ಕೊರತೆ ಎದುರಿಸುತ್ತಿರುವ ಇಲಾಖೆ ಕನಿಷ್ಠ ಹೊಂಡ ಮುಚ್ಚುವ ಕಾರ್ಯಕ್ಕೂ ವಿಳಂಬ ನೀತಿ ಅನುಸರಿಸುತ್ತಿರುವುದು ವಾಹನ ಚಾಲಕರಿಗೆ ತೊಂದರೆ ಉಂಟುಮಾಡಿದೆ. ದ್ವಿಚಕ್ರ ವಾಹನ ಚಾಲಕರ ಸ್ಥಿತಿಯಂತೂ ಹೇಳತೀರದು.
ವಂಡ್ಸೆಯಿಂದ ಹಾಲ್ಕಲ್ ತನಕ ಮುಖ್ಯ ರಸ್ತೆಯ ಡಾಮರು ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗೆ ಆ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ರಸ್ತೆಯ ದುಸ್ಥಿತಿಗೆ ಕಾರಣವಾಗಿದೆ.
– ಗುರುರಾಜ ಗಂಟಿಹೊಳೆ, ಶಾಸಕರು
Related Articles
ಕರ್ನಾಟಕ, ಕೇರಳ, ತಮಿಳುನಾಡು ಅಲ್ಲದೇ ಆಂಧ್ರಪ್ರದೇಶದಿಂದ ಕೊಲ್ಲೂರು ಕ್ಷೇತ್ರಕ್ಕೆ ಸಾವಿರಾರು ಭಕ್ತರು ನಿತ್ಯ ನಿರಂತರ ಆಗಮಿಸುತ್ತಾರೆ. ಹದಗೆಟ್ಟ ಮುಖ್ಯ ರಸ್ತೆಯ ದುಸ್ಥಿತಿಯಿಂದಾಗಿ ಭಯದ ವಾತಾವರಣದಲ್ಲೇ ಸಂಚರಿಸಬೇಕಾಗಿದೆ.
Advertisement
ಇಡೂರು, ಜಡ್ಕಲ್ ಮುಂತಾದೆಡೆ ಭಾರೀ ಹೊಂಡಗಳಿಂದ ಕೂಡಿದ್ದು, ಅಮಿತ ವೇಗದಲ್ಲಿ ಸಾಗಿದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ಕೊಲ್ಲೂರು ಕ್ಷೇತ್ರಕ್ಕೆ ಕೇಂದ್ರ ರಾಜ್ಯ ಸಚಿವರು ಸಹಿತ ಅನೇಕ ರಾಜಕೀಯ ಮುಂದಾಳುಗಳು ಈ ಮಾರ್ಗವಾಗಿ ಆಗಮಿಸುತ್ತಾರೆ. ಆದರೆ ರಸ್ತೆಯ ದುಸ್ಥಿತಿಯ ಬಗ್ಗೆ ಯಾರೊಬ್ಬರು ಸರಕಾರದ ಗಮನ ಸೆಳೆದು ಕ್ರಮ ಕೈಗೊಳ್ಳುವ ಬಗ್ಗೆ ಒತ್ತಾಯಿಸುತ್ತಿಲ್ಲ.