Advertisement

Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ

05:29 PM Oct 17, 2024 | Team Udayavani |

ಕೋಮಲ್‌ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡಿರುವ “ಯಲಾ ಕುನ್ನಿ’ ಚಿತ್ರ ಅಕ್ಟೋಬರ್‌ 25ಕ್ಕೆ ತೆರೆಕಾಣುತ್ತಿದೆ. ಸೌಂದರ್ಯ ಸಿನಿ ಕಂಬೈನ್ಸ್‌ ಹಾಗೂ ನರಸಿಂಹ ಸಿನಿಮಾಸ್‌ನಡಿ ಅನುಸೂಯ ಕೋಮಲ್‌ ಕುಮಾರ್‌, ಸಹನ ಮೂರ್ತಿರವರು ನಿರ್ಮಿಸಿರುವ ಈ ಚಿತ್ರವನ್ನು ಪ್ರದೀಪ್‌ ನಿರ್ದೇಶಿಸಿದ್ದಾರೆ. ಸಿನಿಮಾ ಬಿಡುಗಡೆಗೆ ಮುನ್ನ ಚಿತ್ರತಂಡ ಮಾಧ್ಯಮ ಮುಂದೆ ಬಂದು ಮಾಹಿತಿ ಹಂಚಿಕೊಂಡಿತು.

Advertisement

ಚಿತ್ರದ ಬಗ್ಗೆ ಮಾತನಾಡುವ ನಟ ಕೋಮಲ್‌, ನಿರ್ದೇಶಕ ಎನ್‌ ಆರ್‌. ಪ್ರದೀಪ್‌ ನನಗೆ ಈ ಚಿತ್ರದ ಕಥೆ ಹೇಳಿದಾಗ ಈ ಪಾತ್ರ ಮಾಡಲು ಕಷ್ಟ ಅಂತ ಹೇಳಿದ್ದೆ. ಆದರೆ ಅವರು ಬಿಡದೇ ನೀವು ಮಾಡುತ್ತೀರಾ ಅಂತ ಒಪ್ಪಿಸಿ ಈ ಪಾತ್ರ ಮಾಡಿಸಿದ್ದಾರೆ. ನಾನು ಮೊದಲ ಬಾರಿ ವಜ್ರಮುನಿ ಅವರ ಗೆಟಪ್‌ ಹಾಕಿಕೊಂಡು ಕನ್ನಡಿ ಮುಂದೆ ಬಂದು ನಿಂತಾಗ ನನಗೆ ನಾನು ಕಾಣಲಿಲ್ಲ. ವಜ್ರಮುನಿ ಅವರೆ ಕಂಡರು. ಅವರ ಆಶೀರ್ವಾದದಿಂದ ಈ ಪಾತ್ರ ಮಾಡಲು ಸಾಧ್ಯವಾಯಿತು. ಎರಡು ಶೇಡ್‌ ಗಳಲ್ಲಿ ನನ್ನ ಪಾತ್ರವಿರುತ್ತದೆ. ವಜ್ರಮುನಿ ಅವರ ಮೊಮ್ಮಗ ಆಕರ್ಷ್‌ ಕೂಡ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಿಸರ್ಗ ಅಪ್ಪಣ್ಣ ಈ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ನನ್ನ ಅಣ್ಣನ ಮಗ ಯತಿರಾಜ್, ಜಯಸಿಂಹ ಮುಸುರಿ, ಮಯೂರ್‌ ಪಟೇಲ್, ಸಾಧುಕೋಕಿಲ, ದತ್ತಣ್ಣ, ಮಿತ್ರ, ತಬಲ ನಾಣಿ, ಶಿವರಾಜ್‌ ಕೆ.ಆರ್‌. ಪೇಟೆ, ಮಾನಸಿ ಸುಧೀರ್‌, ಸುಮನ್‌ ನಗರಕರ್‌ ಮುಂತಾದವರು ನಮ್ಮ ಚಿತ್ರದ ತಾರಾಬಳಗದಲ್ಲಿ¨ªಾರೆ’ ಎಂದರು.

ಚಿತ್ರಕ್ಕೆ ಧರ್ಮವಿಶ್‌ ಅವರ ಸಂಗೀತ, ಹಾಲೇಶ್‌ ಛಾಯಾಗ್ರಹಣ, ಕೆ.ಎಂ.ಪ್ರಕಾಶ್‌ ಸಂಕಲನ ಹಾಗೂ ಮುರಳಿ ಮಾಸ್ಟರ್‌ ನೃತ್ಯ ನಿರ್ದೇಶನವಿದೆ. “ಕೆಲವು ಸಿನಿಮಾಗಳಿಗೆ ಅಸಿಸ್ಟೆಂಟ್‌ ಡೈರೆಕ್ಟರ್‌ ಆಗಿ ಕಾರ್ಯ ನಿರ್ವಹಿಸಿರುವ ನನಗೆ ಇದು ನಿರ್ದೇಶಕನಾಗಿ ಮೊದಲ ಚಿತ್ರ. ಅವಕಾಶ ನೀಡಿದ ಕೋಮಲ್‌ ಕುಮಾರ್‌ ಹಾಗೂ ಸಹನಾ ಮೂರ್ತಿ ಅವರಿಗೆ ಧನ್ಯವಾದ. ಈ ಸಂದರ್ಭದಲ್ಲಿ ಕೋಮಲ್‌ ಕುಮಾರ್‌, ಅನುಸೂಯ ಕೋಮಲ್‌ ಕುಮಾರ್‌, ಜಗ್ಗೇಶ್‌ ಸರ್‌ ಹಾಗೂ ವಜ್ರಮುನಿ ಅವರ ಕುಟುಂಬದವರನ್ನು ವಿಶೇಷವಾಗಿ ಸ್ಮರಿಸಿಕೊಳ್ಳುತ್ತೇನೆ. ಕೋಮಲ್‌ ಕುಮಾರ್‌ ಅವರ ವಜ್ರಮುನಿ ಲುಕ್‌ಗೆ ಈಗಾಗಲೇ ಅಭಿಮಾನಿಗಳು ಫಿದಾ ಆಗಿದ್ದಾರೆ. ಕಲಾವಿದರು ಹಾಗೂ ತಂತ್ರಜ್ಞರು ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿ ಬಂದಿದೆ’ ಎಂದು ನಿರ್ದೇಶಕ ಎನ್‌ಆರ್‌.ಪ್ರದೀಪ ತಿಳಿಸಿದರು.

“ನಮ್ಮ ತಂದೆ ಅವರಿಗೆ ಹೆಸರು ತಂದುಕೊಟ್ಟ ಪಾತ್ರ ಪಡವಾರಹಳ್ಳಿ ಪಾಂಡವರು ಚಿತ್ರದ ಕನೆಕ್ಷನ್‌ ಕಾಳಪ್ಪ. ನಾನು ಕೂಡ ಈ ಚಿತ್ರದಲ್ಲಿ ಅದೇ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ’ ಎಂದರು ಜಯಸಿಂಹ ಮುಸುರಿ. ಚಿತ್ರದಲ್ಲಿ ಮಯೂರ್‌ ಪಟೇಲ್‌ ಮಾರಕ ಎಂಬ ಪಾತ್ರ ಮಾಡಿದ್ದಾರೆ. ಚಿತ್ರದಲ್ಲಿ 4 ಹಾಡುಗಳಿದ್ದು, ಮೂರು ಹಾಡುಗಳನ್ನು ನಿರ್ದೇಶಕರು ಹಾಗೂ ಒಂದು ಹಾಡನ್ನು ಪ್ರಮೋದ್‌ ಮರವಂತೆ ಬರೆದಿದ್ದಾರೆ. ಆಂತೋಣಿ ದಾಸ್‌, ಅನಿರುದ್ಧ್ ಶಾಸ್ತ್ರಿ, ನವೀನ್‌ ಸಜ್ಜು, ಶಶಾಂಕ್‌ ಶೇಷಗಿರಿ ಹಾಗೂ ನಾನು ಹಾಡಿದ್ದೇವೆ ಎಂದು ಹಾಡುಗಳು ಹಾಗೂ ಹಾಡಿದವರ ಬಗ್ಗೆ ಸಂಗೀತ ನಿರ್ದೇಶಕ ಧರ್ಮವಿಶ್‌ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next