Advertisement

Kannada Cinema; ಕೋಮಲ್ ಹೊಸ ಚಿತ್ರ ‘ಕೋಣ’

05:11 PM Dec 01, 2023 | Team Udayavani |

ನಟ ಕೋಮಲ್‌ ಸದ್ದಿಲ್ಲದೇ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಅದು “ಕೋಣ’. ಇತ್ತೀಚೆಗೆ ಈ ಚಿತ್ರದ ಪೋಸ್ಟರ್‌ ಬಿಡುಗಡೆಯಾಯಿತು. ಈ ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಲಿದೆ.

Advertisement

ಡಾರ್ಕ್‌ ಕಾಮಿಡಿ ಜಾನರ್‌ ಇರುವ ಈ ಚಿತ್ರವನ್ನು ಈ ಹಿಂದೆ ಜಗ್ಗೇಶ್‌ ಅವರು ಅಭಿನಯಿಸಿದ್ದ “8ಎಂಎಂ’ ಚಿತ್ರವನ್ನು ನಿರ್ದೇಶಿಸಿದ್ದ ಎಸ್‌. ಹರಿಕೃಷ್ಣ ನಿರ್ದೇಶಿಸುತ್ತಿದ್ದಾರೆ. ಇದೊಂದು ನೈಜ ಘಟನೆ ಆಧಾರಿತ ಚಿತ್ರವಾಗಿದೆ. ಕೋಮಲ್‌ ಅವರು ಈವರೆಗೂ ಕಾಣಿಸಿಕೊಳ್ಳದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಕನ್ನಡದಲ್ಲಿ ಆನೆ, ನಾಯಿ, ಕೋತಿ ಮೊದಲಾದ ಪ್ರಾಣಿಗಳನ್ನು ಬಳಸಿಕೊಂಡು ಸಾಕಷ್ಟು ಬಂದಿದ್ದು ಈ ಚಿತ್ರದಲ್ಲಿ ಕೋಣ ಮುಖ್ಯ ಪಾತ್ರವಾಗಿರುವುದು ವಿಶೇಷವಾಗಿರಲಿದೆ. ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ.

ವಿನೋದ್‌ ಕುಮಾರ್‌ ಹಾಗೂ ಸೆಲ್ವನ್‌ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಶಶಾಂಕ್‌ ಶೇಷಗಿರಿ ಸಂಗೀತ ನಿರ್ದೇಶನ, ವಿನೋದ್‌ ಕುಮಾರ್‌ ಬಿ ಛಾಯಾಗ್ರಹಣ ಹಾಗೂ ಉಮೇಶ್‌ ಆರ್‌.ಬಿ ಅವರ ಸಂಕಲನ ಈ ಚಿತ್ರಕ್ಕಿದೆ.

ಸಂಜಯ್‌ ಹಾಗೂ ಉತ್ತಮ್‌ ಸ್ವರೂಪ್‌ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next