Advertisement

ಶಾಲೆ ಪ್ರಗತಿಗೆ ಗ್ರಾಪಂ ಸಹಕಾರ ಅಗತ್ಯ

04:48 PM Dec 27, 2019 | Naveen |

ಕೂಡ್ಲಿಗಿ: ಗಜಾಪುರ ಸಮೂಹ ಸಂಪನ್ಮೂಲ ಕೇಂದ್ರ ವ್ಯಾಪ್ತಿಯ ಶಾಲೆಗಳ ಅಭಿವೃದ್ಧಿಗೆ ಸ್ಥಳೀಯ ಗ್ರಾಪಂಗಳ ಕೊಡುಗೆ ಅನನ್ಯವಾಗಿದ್ದು, ಗ್ರಾಪಂ ವತಿಯಿಂದ ಶಾಲೆಯ ಕಾಂಪೌಂಡ್‌ ಸೇರಿದಂತೆ ವಿವಿಧ ಕಾಮಗಾರಿಗಳ ಮೂಲಕ ಶಾಲೆಗಳ ಅಭಿವೃದ್ಧಿಗೆ ನಿರಂತರ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಎಂದು ಗಜಾಪುರ ಸಮೂಹ ಸಂಪನ್ಮೂಲ ಕೇಂದ್ರದ ಸಿ.ಆರ್‌.ಪಿ.ಸಂದೀಪ್‌ ಹೇಳಿದರು.

Advertisement

ಗಜಾಪುರ ಸಮೂಹ ಸಂಪನ್ಮೂಲ ಕೇಂದ್ರದ ನವೀಕರಣ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಂದಗಲ್ಲು ಗ್ರಾಪಂನವರು ಸಹಕಾರ ನೀಡಿದ ಪರಿಣಾಮವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕಂದಗಲ್ಲು ಗ್ರಾಪಂ ವ್ಯಾಪ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಗೌರವ ಸಮರ್ಪಣೆ ಮಾಡುತ್ತಿರುವುದು ಕೂಡ ಅವರ ಶಿಕ್ಷಣದ ಕಾಳಜಿಗೆ ಇಲಾಖೆ ಅಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿರುವ ಮುಖ್ಯಗುರುಗಳು ಹಾಗೂ ಶಿಕ್ಷಕರಿಗೂ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಕೂಡ್ಲಿಗಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಮಾತನಾಡಿ, ಗಜಾಪುರ ಸಮೂಹ ಸಂಪನ್ಮೂಲ ಕೇಂದ್ರದ ವ್ಯಾಪ್ತಿಯ ಶಾಲೆಗಳಲ್ಲಿ ಶಿಕ್ಷಣದ ಅಭಿವೃದ್ಧಿ ನಿರಂತರವಾಗಿ ಸಾಗುತ್ತಿದ್ದು, ಅಧಿಕಾರಿಗಳು ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸಿದರೆ ಕಾಮಗಾರಿಗಳು, ಗುಣಮುಟ್ಟದ ಶಿಕ್ಷಣ ನೀಡಲು ಸಾಧ್ಯ ಎಂದರು.

ಕಂದಗಲ್ಲು ಗ್ರಾಪಂ ಅಧ್ಯಕ್ಷೆ ತಳವಾರ ನೀಲಮ್ಮ ಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಕಂದಗಲ್ಲು ಗ್ರಾಪಂ ಪಿಡಿಒ ಕೆ.ಮಾರುತೇಶ, ಕೂಡ್ಲಿಗಿ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಿ.ಶಿವರಾಜ್‌, ಗಜಾಪುರ ಗ್ರಾಪಂ ಸದಸ್ಯರಾದ ಬೆಳದೇರಿ ಮಲ್ಲಿಕಾರ್ಜುನ, ಹರಿಜನ ಗಂಗಪ್ಪ, ಗ್ರಾಮದ ಮುಖಂಡರಾದ ಕಾಳಾಪುರ ಮರಿಯಪ್ಪ, ಮುಖ್ಯಗುರು ಜಿ. ನಾಗಮ್ಮ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next