ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಬಾಳಗಡಿ ಗ್ರಾಮದ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೇಸರಿ ಶಲ್ಯ – ಸ್ಕಾರ್ಫ್ ವಿವಾದ ಮಂಗಳವಾರವೂ ಮುಂದುವರಿದಿದ್ದು, ಇಂದು ಕೂಡಾ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಮನವೊಲಿಸಿದ ಪ್ರಾಂಶುಪಾಲರು, ಜನವರಿ 10 ರಂದು ಪೋಷಕರ ಸಭೆ ನಡೆಸುವ ಭರವಸೆ ನೀಡಿದ್ದಾರೆ.
ಜ.10ರಂದು ಕಾಲೇಜಿಗೆ ರಜೆ ನೀಡಿ ಪೋಷಕರ ಸಭೆ ನಡೆಸಲಾಗುವುದು. ಶಾಲಾ ಆಡಳಿತ ಮಂಡಳಿ ಮತ್ತು ಪೋಷಕರ ಸಭೆಯಲ್ಲಿ ಸಮವಸ್ತ್ರದ ಕುರಿತು ಮಾಡಲಾಗುವುದು ಎಂದು ಪ್ರಾಂಶುಪಾಲರು ಹೇಳಿದ್ದಾರೆ.
ಇದನ್ನೂ ಓದಿ:ಕೇರಳ ಟು ಮೂಡಿಗೆರೆ: 22 ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗಳು!
ಮುಸ್ಲಿಂ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ ಸೋಮವಾರವು ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದಿದ್ದರು. ಮೂರು ವರ್ಷದ ಹಿಂದೆಯೂ ಈ ಪ್ರಥಮ ದರ್ಜೆ ಕಾಲೇಜಿಲ್ಲಿ ಇಂತಹದ್ದೇ ವಿವಾದವಾಗಿತ್ತು.