Advertisement

Koppal; ಬಿಜೆಪಿ ಹ್ಯಾಟ್ರಿಕ್ ಗೆಲುವಿಗೆ ಸಹಕಾರ ಅಗತ್ಯ: ಸಂಸದ ಸಂಗಣ್ಣ ಕರಡಿ

08:08 PM Jan 13, 2024 | Team Udayavani |

ಕುಷ್ಟಗಿ: ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಮುಖಂಡರು, ಕಾರ್ಯಕರ್ತರ ಸಂಘಟನೆ ಹಾಗೂ ಜನಾಶೀವಾದದಿಂದ ಎರಡು ಬಾರಿ ಸಂಸದನಾಗಿ ಆಯ್ಕೆಯಾಗಿದ್ದೇನೆ. ಈ ಬಾರಿಯೂ ಕೂಡ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಲು ಮುಖಂಡರ ಹಾಗೂ ಕಾರ್ಯಕರ್ತರು ಸಹಕಾರ ಅಗತ್ಯ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.

Advertisement

ತಾಲೂಕಿನ ಕಂದಕೂರ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಬಿಜೆಪಿಗೆ ಕಾರ್ಯಕರ್ತರೇ ನಾಯಕರು. ಇದು ಕಾರ್ಯಕರ್ತರ ಪಕ್ಷ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆ ಹಾಗೂ ಯೋಜನೆ ಮನೆ ಮನೆ ಮುಟ್ಟಿಸಿದರೆ ಸಾಕು ಪ್ರತಿಯೊಬ್ಬರ ಮತ ಬಿಜೆಪಿಗೆ ಬೀಳಲಿದೆ. ಈ ನಿಟ್ಟಿನಲ್ಲಿ ಕೊಪ್ಪಳ ಲೋಕಸಭಾ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದ ಶಾಸಕರು, ಮಾಜಿ ಶಾಸಕರು, ಹಿರಿಯ ಮುಖಂಡರು, ವಿವಿಧ ಮೋಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಮನೆ ಮನೆಗೆ ತೆರಳಿ ಬಿಜೆಪಿಯ ಯೋಜನೆ ತಿಳಿಸಬೇಕು. ವ್ಯಕ್ತಿಗಿಂತ ಪಕ್ಷ ಮೊದಲು. ಪಕ್ಷಕ್ಕಿಂತ ದೇಶ ಮೊದಲು ಎಂಬ ಕಲ್ಪನೆಯಲ್ಲಿ ಪಕ್ಷ ಸಂಘಟಿಸಬೇಕು ಎಂದು ಮನವಿ ಮಾಡಿದರು.

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಹೆಚ್ಚಿರಬಹುದು. ಆದರೆ, ಕಾರ್ಯಕರ್ತರ ಸಂಖ್ಯೆಯಲ್ಲಿ ಬಿಜೆಪಿ ಮುಂದಿದೆ. ಜನತೆಯ ಮನದಲ್ಲಿ ಬಿಜೆಪಿ ಮೇಲೆಯೇ ಒಲವಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಭಿವೃದ್ಧಿ ಕೆಲಸಗಳೇ ನಮಗೆ ಶೀರಕ್ಷೆಯಾಗಿದ್ದು, ಮತ್ತೊಮ್ಮೆ ಬಿಜೆಪಿ ಗೆಲುವು ನಿಶ್ಚಿತವಾಗಿದೆ. ಕಾರ್ಯಕರ್ತರು ಹಾಗೂ ಮುಖಂಡರು ಪಕ್ಷ ಸೂಚಿಸಿದ ಜವಾಬ್ದಾರಿ ಯನ್ನು ಸಮರ್ಥವಾಗಿ ನಿರ್ವಹಿಸಿ ಕ್ಷೇತ್ರ ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದರು.

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕಳೆದ 9 ವರ್ಷದಲ್ಲಿ ರೈಲ್ವೆ, ಹೆದ್ದಾರಿ ಸೇರಿ ಸಾವಿರಾರು ಕೋಟಿ ರೂ. ಗಳ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಭಾಗಶಃ ಎಲ್ಲ ತಾಲೂಕುಗಳಿಗೆ ರೈಲ್ವೆ ಹಳಿ ಹಾಕಲಾಗಿದೆ. ರೈಲ್ವೆ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ. ಸಾವಿರಾರು ಕೋಟಿ ರೂ. ಅಭಿವೃದ್ಧಿ ಕೆಲಸ ಪ್ರಗತಿಯಲ್ಲಿವೆ. ಮುಂದಿನ ಬಾರಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ತತ್ ಕ್ಷಣವೇ ಕಾಮಗಾರಿ ಲೋಕಾರ್ಪಣೆ ಮಾಡಲಾಗುವುದು ಎಂದರು.

ಕಲ್ಯಾಣ ಕರ್ನಾಟಕ ಭಾಗದ ಶಾಸಕರು ಹಾಗೂ ಹಿರಿಯ ಮುಖಂಡರಿಗೆ ಬಿಜೆಪಿ ಉನ್ನತ ಸ್ಥಾನ ನೀಡಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಗ್ಗೂಡಿ ಪಕ್ಷ ಗೆಲ್ಲಿಸಲಾಗುವುದು. ರಾಜ್ಯದಿಂದ ಹೆಚ್ಚಿನ ಸ್ಥಾನ ಗೆಲ್ಲಿಸಿ ಕೊಡಲಾಗುವುದು ಎಂದು ವಿಧಾನಸಭಾ ಮುಖ್ಯ ಸಚೇತಕ ಹಾಗೂ ಶಾಸಕ ದೊಡ್ಡನಗೌಡ ಪಾಟೀಲ್ ಹೇಳಿದರು.

Advertisement

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಶೇಖಪ್ಪ ಹರಿಜನ, ಬಿಜೆಪಿ ಮಂಡಲ ಅಧ್ಯಕ್ಷ ಬಸವರಾಜ ಹಳ್ಳೂರು, ಮುಖಂಡ ರೇಣುಕಮ್ಮ ಮಡಿವಾಳರ, ಭೀಮಣ್ಣ ಬಿಜಕಲ್ಲ, ಸಲೀಂ ಸಾಬ್ ಟೆಂಗುಂತಿ, ಶಂಕರಪ್ಪ ಪಾಟೀಲ್, ಶರಣಪ್ಪ ಗೋಪಾಳಿ ಹಾಗೂ ಪಕ್ಷದ ಮುಖಂಡರು, ಗ್ರಾಂ.ಪಂ.ಸದಸ್ಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಕಂದಕೂರ,ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next