Advertisement

Koppal: ಮಾಜಿ ಸಂಸದ ಶಿವರಾಮೆ ಗೌಡ ಬಿಜೆಪಿ ಸೇರ್ಪಡೆಗೆ ದಿನಾಂಕ ಫಿಕ್ಸ್

07:17 PM Apr 04, 2024 | Team Udayavani |

ಕೊಪ್ಪಳ: ಮಾಜಿ ಸಂಸದ ಶಿವರಾಮೆಗೌಡ ಅವರು ಕಾಂಗ್ರೆಸ್ ತೊರೆದು ಏ.5 ರಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

Advertisement

ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ 2009 ರಲ್ಲಿ ಬಿಜೆಪಿಯಿಂದ ಸಂಸದರಾಗಿ ಆಯ್ಕೆಯಾಗಿದ್ದ ಶಿವರಾಮೆಗೌಡ, 2014ರಲ್ಲಿ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರಿದ್ದರು. 10 ವರ್ಷಗಳ ಕಾಲ ಕಾಂಗ್ರೆಸ್ ನಲ್ಲಿದ್ದು, ಈಗ ಮತ್ತೆ ಮರಳಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ.

ಹಾಲಿ ಬಿಜೆಪಿ ಸಂಸದ ಸಂಗಣ್ಣ ಕರಡಿ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ತೀವ್ರವಾಗಿದ್ದು ಕಾಂಗ್ರೆಸ್ ನಿಂದ ಬಿಜೆಪಿಗೆ, ಬಿಜೆಪಿಯಿಂದ ಕಾಂಗ್ರೆಸ್ ಗೆ ಹಲವು ನಾಯಕರು ವಲಸೆ ಹೋಗುತ್ತಿದ್ದು ಚುನಾವಣ ಕಣ ಕಾವೇರಿದೆ.

Advertisement

Udayavani is now on Telegram. Click here to join our channel and stay updated with the latest news.

Next