Advertisement

Koppal ಕಿಲ್ಲಾರಹಟ್ಟಿ ಘಟನೆ; ಉದಯವಾಣಿ ವರದಿಗೆ ಸ್ಪಂದಿಸಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

07:31 PM Jan 02, 2024 | Team Udayavani |

ದೋಟಿಹಾಳ: ಕೊಪ್ಪಳ ಜಿಲ್ಲೆಯ ಗಡಿ ಭಾಗದಲ್ಲಿರುವ ಕಿಲ್ಲಾರಹಟ್ಟಿ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಬರುವ ರಾಮಜೀ ನಾಯಕ್ ತಾಂಡದಲ್ಲಿ 3-6 ವರ್ಷದೊಳಗಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇಲ್ಲಿ ಕಡ್ಡಾಯ ಶಿಕ್ಷಣ ಮಾಯವಾಗುತ್ತಿದೆ ಎಂಬ ಉದಯವಾಣಿ ಆನ್ಲೈನ್ ಸುದ್ದಿ ಪ್ರಕಟಗೊಂಡ ಕೆಲವೇ ಗಂಟೆಗಳಲ್ಲಿ ವರದಿಗಾರರು ಸಂಪರ್ಕಿಸಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜೆ. ರಾಮತ್ನಾಳ ಅವರು ಮಾತನಾಡಿ , ಕಡ್ಡಾಯವಾಗಿ ಎಲ್ಲಾ ಮಕ್ಕಳಿಗೆ ಶಿಕ್ಷಣ ನೀಡುವುದು ಸರಕಾರದ ಕೆಲಸ.

Advertisement

ತಾಯಿಯ ಗರ್ಭದಲ್ಲಿರುವ ಮಗುವಿನಿಂದ ಹಿಡಿದು 14 ವರ್ಷದ ಮಗುವಿನ ರಕ್ಷಣೆ ಮಾಡುವುದು ಹಾಗೂ ಶಿಕ್ಷಣ ನೀಡುವುದು ಸರ್ಕಾರದ ಕೆಲಸ, ಕಡ್ಡಾಯವಾಗಿ ಎಲ್ಲಾ ಮಕ್ಕಳಿಗೂ ಶಿಕ್ಷಣ ಸಿಗಬೇಕು, ತಾಂಡದಲ್ಲಿ 10 ಮಕ್ಕಳಿಗೆ ಇರಲಿ… ಒಂದೇ ಮಗು ಇರಲಿ ಅವರಿಗೆ ಕಡ್ಡಾಯವಾಗಿ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ. ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗುವಂತಿಲ್ಲ, ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಶಿಕ್ಷಣ ನೀಡುವುದು ಸರಕಾರದ ಕರ್ತವ್ಯ. ಹೀಗಾಗಿ ತತಕ್ಷಣದಿಂದಲೇ ಅಲ್ಲಿಯ ಮಕ್ಕಳಿಗೆ ಶಿಕ್ಷಣ ಸಿಗುವಂತಾಗಬೇಕು. ಕೂಡಲೇ ಆ ತಾಂಡಕ್ಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಜೊತೆ ಭೇಟಿ ನೀಡಿ. ಅಲ್ಲಿಯ ಮಕ್ಕಳಿಗೆ ಶಿಕ್ಷಣ ಸಿಗುವ ವ್ಯವಸ್ಥೆಯನ್ನು ಆಯೋಗ ಮಾಡುತ್ತದೆ ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜೆ ರಾಮತ್ನಾಳ ಅವರು ಮಾಹಿತಿ ನೀಡಿದ್ದಾರೆ.

ಗರ್ಭದಲ್ಲಿರುವ ಮಗುವಿನಿಂದ ಹಿಡಿದು ಹುಟ್ಟಿದ ಮಕ್ಕಳಿಗೂ ರಕ್ಷಣೆ ನೀಡುವುದು ಹಾಗೂ ಶಿಕ್ಷಣ ನೀಡುವುದು ಸರಕಾರದ ಕರ್ತವ್ಯವಾಗಿದೆ. ಯಾವುದೇ ಕಾರಣಕ್ಕೂ ಮಕ್ಕಳ ಹಕ್ಕನ್ನು ಉಲ್ಲಂಘನೆ ಯಾಗಲು ಆಯೋಗ ಬಿಡುವುದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next