Advertisement
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ವಿವಿಧ ಇಲಾಖೆಗಳ ಕಟ್ಟಡ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಇಲಾಖೆಗಳಿಂದ ಅನುಷ್ಠಾನ ಏಜೆನ್ಸಿಗಳಿಗೆ ನೀಡಿರುವ ಕಟ್ಟಡ ಕಾಮಗಾರಿಗಳನ್ನು ಸಮರ್ಪಕವಾಗಿ ಪೂರ್ಣಗೊಳಿಸಿದ ಹೊರತು ಯಾವುದೇ ಇಲಾಖೆ ಹಸ್ತಾಂತರ ಪ್ರಮಾಣ ಪತ್ರವನ್ನು ನೀಡಬಾರದು. ಒಂದು ವೇಳೆ ಕಾಮಗಾರಿ ಅಪೂರ್ಣವಾಗಿದ್ದಲ್ಲಿ ಅಥವಾ ಸಣ್ಣ ಪುಟ್ಟ ಕೆಲಸಗಳು ಬಾಕಿ ಉಳಿದಲ್ಲಿ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದರು. ಅನುಷ್ಠಾನ ಏಜೆನ್ಸಿಗಳಿಗೆ ಹಲವು ವರ್ಷಗಳ ಹಿಂದೆಯೇ ಹಂಚಿಕೆ ಮಾಡಿದ, ಆಡಳಿತಾತ್ಮಕ ಅನುಮೋದನೆ ನೀಡಿ, ಅನುದಾನ ಬಿಡುಗಡೆ ಮಾಡಿದ ನಂತರವೂ ಕಾಮಗಾರಿ ಪೂರ್ಣಗೊಳಿಸಿಲ್ಲ. ಕೆಲವು ಕಡೆಗಳಲ್ಲಿ ಕಾಮಗಾರಿ ಆರಂಭಿಸಿಯೇ ಇಲ್ಲ. ಇದಕ್ಕೆ ಸೂಕ್ತ ಕಾರಣಗಳನ್ನು 3 ದಿನಗಳೊಳಗಾಗಿ ಸಲ್ಲಿಸಬೇಕು. ಇಲಾಖೆಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆಯಾದ ನಂತರ ನಿರ್ದಿಷ್ಟ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅನುಷ್ಠಾನ ಏಜೆನ್ಸಿಗೆ ಸೂಕ್ತ ನಿರ್ದೇಶನ ನೀಡಬೇಕು. ನಿವೇಶನ ಗುರುತಿಸುವಿಕೆ ಸೇರಿದಂತೆ ಎಲ್ಲ ಹಂತಗಳಲ್ಲೂ ಇಲಾಖೆಗಳು ಏಜೆನ್ಸಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ನಿಗದಿತ ಕಾಲಾವ ಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.
Related Articles
Advertisement
ಸಭೆಯಲ್ಲಿ ಜಿಪಂ ಯೋಜನಾಧಿಕಾರಿ ಟಿ.ಕೃಷ್ಣಮೂರ್ತಿ, ನಗರಾಭಿವೃದ್ಧಿ ಕೋಶದ ಗಂಗಾಧರ, ಜಂಟಿ ಕೃಷಿ ನಿರ್ದೇಶಕ ಶಿವಕುಮಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣವರ, ಡಿ.ಸಿ ದೊಡ್ಡಬಸಪ್ಪ ನೀರಲಕೇರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಅನುಷ್ಠಾನ ಏಜೆನ್ಸಿಗಳಾದ ನಿರ್ಮಿತಿ ಕೇಂದ್ರದ ಶಶಿಧರ, ಕೆಆರ್‌ಐಡಿಎಲ್‌ನ ಚಿಂಚೋಳ್ಕರ್, ಪಿಆರ್ ಇಡಿಯ ಬಡಿಗೇರ್, ಪಿಡಬ್ಲೂಡಿಯ ಕುಲಕರ್ಣಿ ಉಪಸ್ಥಿತರಿದ್ದರು.