Advertisement

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಗುಂಪುಗಳ ಮಾರಾಮಾರಿ; ಇಬ್ಬರ ಸಾವು

04:17 PM Aug 11, 2022 | Team Udayavani |

ಕೊಪ್ಪಳ : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದು ಇಬ್ಬರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಗುರುವಾರ ನಡೆದಿದೆ.

Advertisement

ಯಕಪ್ಪ ತಂ ಶ್ಯಾಮಪ್ಪ ತಳವಾರ (60), ಭಾಷಾ ಸಾಬ (22) ಎನ್ನುವವರು ಸಾವನ್ನಪಿದ್ದು, ಧರ್ಮಣ್ಣ ಹರಿಜನ ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು ಬದುಕಿ ನಡುವೆ ಹೋರಾಟ ಮಾಡುತ್ತಿದ್ದಾನೆ ಎಂದು ವರದಿಯಾಗಿದೆ.

ಹುಲಿಹೈದರ್ ಗ್ರಾಮದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next