Advertisement

ಕೊಪ್ಪಳದಲ್ಲಿ ಕೋವಿಡ್ ಸೋಂಕಿಗೆ ಏಳು ಮಂದಿ ಬಲಿ !

06:27 PM Aug 08, 2020 | sudhir |

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್ ಆರ್ಭಟ ಮುಂದುವರೆದಿದ್ದು, ಶನಿವಾರ ಒಂದೇ ದಿನ ಏಳು ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇದು ನಿಜಕ್ಕೂ ಜಿಲ್ಲೆಯ ಜನರಲ್ಲಿ ಭಾರಿ ಆತಂಖವನ್ನೇ ಮೂಡಿಸಿದೆ.

Advertisement

ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆಯು 48ಕ್ಕೆ ಏರಿಕೆಯಾಗಿದೆ. ಇನ್ನೂ ಇದೇ ದಿನ 107 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಪ್ರತಿ ದಿನವೂ ಒಂದಿಬ್ಬರು ಸೋಂಕಿಗೆ ಬಲಿಯಾಗುತ್ತಿದ್ದಾರೆ. ಶನಿವಾರ ಒಂದೇ ದಿನದಂದೇ ಏಳು ಜನರು ಸೋಂಕಿಗೆ ಬಲಿಯಾಗಿದ್ದು ಇದೇ ಮೊದಲು. ಸಾವಿನ ಸಂಖ್ಯೆ ವೇಗದಗತಿಯಲ್ಲಿ ಏರಿಕೆಯಾಗುತ್ತಿದ್ದು ಜನರಲ್ಲೂ ಆತಂಕದ ಛಾಯೆ ಮೂಡಿಸಿದೆ. ಇನ್ನು ಜಿಲ್ಲೆಯಲ್ಲಿ ಶನಿವಾರ 107 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2329ಕ್ಕೆ ಏರಿಕೆಯಾಗಿದೆ.

ಇನ್ನೂ 1218 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 702 ಜನರನ್ನು ಹೋಂ ಕ್ವಾರೆಂಟೈನ್‌ನಲ್ಲಿಡಲಾಗಿದೆ. ಇನ್ನೂ 208 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next