Advertisement

ಕೊಪ್ಪಳ ಕೋವಿಡ್ ಸೋಂಕಿಗೆ ಮತ್ತಿಬ್ಬರು ಬಲಿ! ಜಿಲ್ಲೆಯಲ್ಲಿ ಸಾವಿನ ಸಂಖ್ಯೆಯು 8ಕ್ಕೆ ಏರಿಕೆ

05:55 PM Jul 12, 2020 | sudhir |

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ ಸಾವಿನ ಆರ್ಭಟವೂ ಮುಂದುವರೆಯುತ್ತಿದ್ದು, ಭಾನುವಾರ ಮತ್ತಿಬ್ಬರು ಮಹಾಮಾರಿ ವೈರಸ್‌ಗೆ ಬಲಿಯಾಗಿದ್ದಾರೆ. ಈ ಇಬ್ಬರ ಸಾವು ಸೇರಿದಂತೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆಯು 8ಕ್ಕೆ ಏರಿಕೆಯಾಗಿದೆ. ಇದು ಜನರನ್ನು ಮತ್ತಷ್ಟು ಆತಂಕಕ್ಕೆ ಒಳಗಾಗುವಂತೆ ಮಾಡಿದೆ.

Advertisement

ಬಳ್ಳಾರಿ ಜಿಲ್ಲೆಯ ಹೊಸಪೇಟೆಯ 68 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿತ್ತು. ಅವರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಭಾನುವಾರ ಮೃತಪಟ್ಟಿದ್ದಾರೆ. ಇನ್ನೂ ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದ 39 ವರ್ಷದ ಮಹಿಳೆಗೂ ಸೋಂಕಿನ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಅವರನ್ನು ತಳಕಲ್ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಿತ್ತು. ಅವರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಸಾವಿನ ಕೇಕೆ ಹಾಕುತ್ತಿರುವುದು ನಿಜಕ್ಕೂ ಜನ ಜೀವನ ಬೆಚ್ಚಿ ಬೀಳುವಂತೆ ಮಾಡುತ್ತಿದೆ. ಭಾನುವಾರ ಇಬ್ಬರ ಮಹಿಳೆಯರ ಸಾವು ಸೇರಿದಂತೆ 8 ಜನರು ಸಾವನ್ನಪ್ಪಿದ್ದಾರೆ. ಇದು ಜನರಲ್ಲಿ ದಿನೇ ದಿನೇ ಆತಂಕ ತಂದಿಡುತ್ತಿದೆ. ಜಿಲ್ಲಾಡಳಿತವು ಮೃತರ ಅಂತ್ಯಕ್ರಿಯೆಗೆ ಸಿದ್ದತೆ ನಡೆಸಿದೆ.

Advertisement

Udayavani is now on Telegram. Click here to join our channel and stay updated with the latest news.

Next