Advertisement

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

01:02 PM Sep 07, 2024 | Team Udayavani |

ಕೊಪ್ಪಳ: ಗಣೇಶ ಚತುರ್ಥಿಯಂದು ಪೂಜಿಸಲು ಟ್ರ್ಯಾಕ್ಟರ್ ಮೂಲಕ ಗಣೇಶನ ವಿಗ್ರಹವನ್ನು ತರುತ್ತಿದ್ದ ವೇಳೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ ಗಣೇಶನ ವಿಗ್ರಹಕ್ಕೆ ಹಾನಿಯಾದ ಘಟನೆ ಕೊಪ್ಪಳ ತಾಲೂಕಿನ ಕೋಳೂರು ಕ್ರಾಸ್ ಬಳಿ ಶನಿವಾರ ನಡೆದಿದೆ.

Advertisement

ಮಸಬಹಂಚಿನಾಳ‌ ಗ್ರಾಮದಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಲು ಕೊಪ್ಪಳದಿಂದ ಗಣೇಶನ ಮೂರ್ತಿಯನ್ನು ಟ್ರ್ಯಾಕ್ಟರ್ ನಲ್ಲಿ ತೆಗೆದುಕೊಂಡು ಹೋಗಲಾಗುತ್ತಿತ್ತು ಈ ವೇಳೆ ಕೋಳೂರು ಕ್ರಾಸ್ ಬಳಿ ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದಿದೆ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿದೆ ಈ ವೇಳೆ ಟ್ರ್ಯಾಕ್ಟರ್ ನಲ್ಲಿದ್ದ ಗಣೇಶನ ಮೂರ್ತಿಗೆ ಹಾನಿಯಾಗಿದೆ.

ಇದನ್ನೂ ಓದಿ: Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next