Advertisement

ಕೊಪ್ಪಲಂಗಡಿ: ಚರಂಡಿಗೆ ಉರುಳಿದ ಪಿಕಪ್; ಇಬ್ಬರಿಗೆ ಗಾಯ

10:43 AM May 18, 2022 | Team Udayavani |

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು – ಕೊಪ್ಪಲಂಗಡಿ ಹೆದ್ದಾರಿ ವಿಭಾಜಕದ ಬಳಿ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

Advertisement

ಉಡುಪಿಯಿಂದ ಮಂಗಳೂರು ಕಡೆಗೆ ಕಾಂಕ್ರೀಟ್ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವೇಳೆ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ.

ಇದನ್ನೂ ಓದಿ:ನಾವು ಮುಳುಗುತ್ತಿದ್ದೇವೆಂದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

ಚಾಲಕ ಹಾಗೂ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಕಾಪು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next