Advertisement

ಕೊರಗಜ್ಜನ ಮಹಿಮೆಯಿಂದ ಜೀವ ಹೋಗುವ ಸ್ಥಿತಿಯಲ್ಲಿದ್ದ ಮಗು ಬದುಕಿ ಬಂತು; ಉಡುಪಿಯಲ್ಲೊಂದು ಪವಾಡ

04:25 PM Oct 24, 2022 | Team Udayavani |

ಉಡುಪಿ: ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ‌ ಮಹಿಮೆ, ಪವಾಡಗಳನ್ನು ನಾವು ಕೇಳಿರುತ್ತೇವೆ. ಅದರಂತೆ, ಜೀವ ಹೋಗುವ ಸ್ಥಿತಿಯಲ್ಲಿದ್ದ ಮಗು ಕೊರಗಜ್ಜನ ದಯೆಯಿಂದ ಬದುಕಿದ ಘಟನೆ ಉಡುಪಿಯಲ್ಲಿ ನಡೆದಿದೆ.

Advertisement

ಸಾಗರ ಮೂಲದ ಪುಟ್ಟ ಹೆಣ್ಣು ಮಗುವಿಗೆ ವಿಪರೀತ ಜ್ವರ  ಕಂಡು ಬಂದಿತ್ತು. ಎರಡು ದಿನ ಕಳೆದರೂ ಜ್ವರ ಕಡಿಮೆಯಾಗದೇ ಮಗು ಅಳು ನಿಲ್ಲಿಸುತ್ತಿರಲ್ಲಿಲ್ಲ. ಹೀಗಾಗಿ‌ ಕುಂದಾಪುರದ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ಪತ್ರೆಯಲ್ಲಿ ಮಗುವಿಗೆ ಪಿಡ್ಸ್ ಇರುವುದಾಗಿಯೂ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಅಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯು ನಲ್ಲಿದ್ದ ಮಗುವಿನ ಆರೋಗ್ಯ ಚಿಂತಾಜನಕವಾಗಿತ್ತು.ಅಷ್ಟೇ ಅಲ್ಲ ಪದೇ ಪದೇ ಮಗುವಿನ ಹೃದಯ ಸ್ತಬ್ಧವಾಗುತ್ತಿರುವುದರ ಬಗ್ಗೆ ವೈದರು  ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ವೈದರು ಪ್ರಯತ್ನ ಮಾಡುವುದಾಗಿಯೂ ಭರವಸೆ ನೀಡಿದರೂ ಮಗುವಿನ ಪ್ರಾಣ ಉಳಿಯುವ ಬಗ್ಗೆ  ಸಂಶಯ ವ್ಯಕ್ಯಪಡಿಸಿದ್ದರು‌. ಮಗುವಿನ ಪರಿಸ್ಥಿತಿ ಕಂಡ ಕುಟುಂಬಸ್ಥರು ಕಂಗಾಲಾಗಿ ಹೋಗಿದ್ದರು‌.

ಅಷ್ಟರಲ್ಲಿ ಅಸ್ಪತ್ರೆ ಬಳಿಯಿದ್ದ ಓರ್ವ ವ್ಯಕ್ತಿ ಕೊರಗಜ್ಜ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ ಹಿನ್ನಲೆಯಲ್ಲಿ ಮಗುವಿನ ಹೆತ್ತವರು ಇಂದ್ರಾಳಿ ,ಎಂಜಿಎಂ ಹಾಸ್ಟೆಲ್ ಬಳಿಯಿರುವ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದು ತೆರಳಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಪುಟ್ಟ ಕಂದಮ್ಮನ ಅರೋಗ್ಯ ದೀಢಿರಾಗಿ ಚೇತರಿಕೆ ಕಾಣಿಸಿಕೊಳ್ಳಲು ಪ್ರಾರಂಭಿಸಿತ್ತು. ವೈದರು ಕೂಡ ತಮ್ಮ ಕೈಲಾದ ಪ್ರಯತ್ನಗಳನ್ನು ಮಾಡುವ ಮೂಲಕ ಹತ್ತೊಂಬತ್ತು ದಿನಗಳಲ್ಲಿ ಮಗು ಅರೋಗ್ಯವಾಗಿ ಹೆತ್ತಮ್ಮಳ ಕೈಯಲ್ಲಿ ಮತ್ತೆ ಬಂದು ಸೇರಿತು.

ಹೃದಯ ಬಡಿತವೇ ನಿಂತು ಹೋಯಿತು ಎಂದಿದ್ದ ಮಗು ಮತ್ತೆ ಕಿಲಕಿಲ‌ ನಗುತ್ತಿರುವುದನ್ನು ಕಂಡು ಕುಟುಂಬಸ್ಥರ ಸಂತೋಷ ಮುಗಿಲು ಮುಟ್ಟಿತ್ತು. ಇದಕ್ಕೆಲ್ಲ ಕಾರಣ ನಂಬಿದ ಕೊರಗಜ್ಜ ಎನ್ನುವುದು ಕುಟುಂಬಸ್ಥರ ನಂಬಿಕೆ ಹೀಗಾಗಿ ಅಸ್ಪತ್ರೆಯಿಂದ ನೇರವಾಗಿ ಇಂದ್ರಾಳಿ ಬಳಿಯ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಮಗುವನ್ನು ಕೊರಗಜ್ಜ ಸ್ವಾಮಿಯ ಮುಂದಿಟ್ಟು  ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದುಕೊಂಡರು. ಬದುಕಿರುವವರೆಗೂ ಈ ಮಗು ಕೊರಗಜ್ಜನ ಪ್ರಸಾದವೆಂದೇ ನಂಬಿ ಬದುಕುತ್ತೇವೆ ಎಂದು ಹೇಳುತ್ತಾ ಅನಂದ ಭಾಷ್ಪಗಳೊಂದಿಗೆ ತನ್ನೂರಿಗೆ ತೆರಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next