Advertisement

ಕೊರಟಗೆರೆ: ನದಿಯಲ್ಲಿ ಕೊಚ್ಚಿ ಹೋಗಿದ್ದ ಚಾಲಕನ ಮೃತದೇಹ ಪತ್ತೆ

08:40 PM Sep 06, 2022 | Team Udayavani |

ಕೊರಟಗೆರೆ: ತಾಲೂಕಿನ ವಡ್ಡಗೆರೆ ಗ್ರಾಪಂ ಗೆ ಸೇರಿದ ಮಲಪನಹಳ್ಳಿ ಜಯಮಂಗಲಿ ನದಿಯಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ವಿ  ಹೋಗಿದ್ದ ಟಾಟಾ ಏಸ್ ವಾಹನ ಹಾಗೂ ಚಾಲಕ ನದಿಯಲ್ಲಿ ಕೊಚ್ಚಿ ಹೋಗಿದ್ದರು. ಸತತ 24ಗಂಟೆಯಿಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ ಬಳಿಕ ವಾಹನ ಮತ್ತು ಚಾಲಕನ‌ ಶವ‌ ಪತ್ತೆಯಾಗಿದೆ.

Advertisement

ಅನಂತಪುರ ಜಿಲ್ಲೆಯ ಸೋಮಂದಪಲ್ಲಿ ಗ್ರಾಮದ ನಿವಾಸಿ ತಿಪ್ಪರಾಜು(42) ಮೃತ ದುರ್ದೈವಿ.

ಕೊರಟಗೆರೆ ತಾಲ್ಲೂಕಿನ ವಡ್ಡಗೆರೆ  ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಪ್ಪನಹಳ್ಳಿ ಗ್ರಾಮದ ಜಯಮಂಗಲಿ ನದಿಯಲ್ಲಿ ಘಟನೆ ನಡೆದಿದ್ದು, ಅಗ್ನಿಶಾಮಕ ಸಿಬಂದಿ, ಕೊರಟಗೆರೆ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರು ನಿರಂತರವಾಗಿ ಕಾರ್ಯಾಚರಣೆ ನಡೆಸಿದ್ದು, ಕೊನೆಗೂ ವಾಹನ ಹಾಗೂ ಚಾಲಕನ ಶವ ಪತ್ತೆಯಾಗಿದ್ದು, ಮೃತದೇಹವನ್ನು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ  ಇರಿಸಲಾಗಿದೆ.

ಇದನ್ನೂ ಓದಿ:ಬಿಜೂರು: ಹಳಿ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ  ರೈಲು ಢಿಕ್ಕಿ; ಗಂಭೀರ

ಸ್ಥಳಕ್ಕೆ ತುಮಕೂರು ಜಿಲ್ಲಾಧಿಕಾರಿ ವೈಎಸ್ ಪಾಟೀಲ್, ಮಧುಗಿರಿಯ ಎ ಸಿ ಸೋಮಪ್ಪ ಕಡಕೋಳ ಹಾಗೂ ಕೊರಟಗೆರೆ ತಹಶೀಲ್ದಾರ್ ನಾಹಿದಾ ಜಮ್ ಜಮ್ ಸೇರಿದಂತೆ ಸ್ಥಳೀಯ ಪೊಲೀಸ್ ಇಲಾಖೆ ಅಧಿಕಾರಿಗಳು  ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, ಸರ್ಕಾರದ ವತಿಯಿಂದ ಕುಟುಂಬಕ್ಕೆ ಪರಿಹಾರ ಕೊಡಿಸುವ ಭರವಸೆ ನೀಡಿದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next