Advertisement
ಸಿದ್ಧರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ಶ್ರೀಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಪ್ರತಿಭಟನೆಯ ವೇಳೆ ಮಾತನಾಡಿದ ಅವರು, ಕಲ್ಲುಗಣಿಗಾರಿಕೆ ವಿರುದ್ಧ ಇಂದು ಪ್ರತಿಭಟನೆ ಮಾಡಲಾಗುತ್ತಿದೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನೀಲಗೊಂಡನಹಳ್ಳಿ ಹಾಗೂ ಎಲೆರಾಂಪುರ ಗ್ರಾಪಂ ವ್ಯಾಪ್ತಿಯ ರೈತರಿಗೆ, ವಿದ್ಯಾರ್ಥಿಗಳಿಗೆ ಮತ್ತು ಜನಸಾಮಾನ್ಯರಿಗೆ ಆಗುವಂತಹ ಅನಾಹುತಗಳನ್ನು ತಡೆಯಲು ಈ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. ಈ ಭಾಗಗಳಲ್ಲಿ ಕಲ್ಲುಗಣಿಗಾರಿಕೆ ಮಾಡಲು ಸರ್ಕಾರ ಅನುಮತಿ ನೀಡಿದ್ದು. ಈ ಭಾಗದ ಶಾಲೆಗಳಲ್ಲಿ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಗಣಿಗಾರಿಕೆಯನ್ನು 600 ಮೀ ಹತ್ತಿರದಲ್ಲಿ, ಕೆರೆಯ ಪಕ್ಕದಲ್ಲಿ ಮತ್ತು ಮಠದ ಪಕ್ಕದಲ್ಲಿ ಈ ಗಣಿಕಾರಿಕೆ ಮಾಡುತ್ತಿದ್ದು ಇದರಿಂದ ವಿದ್ಯಾರ್ಥಿಗಳಿಗೆ, ರೈತರಿಗೆ, ಮತ್ತು ಸ್ಥಳೀಯ ನಿವಾಸಿಗಳಿಗೆ ಅನಾಹುತಗಳು ಸಂಭವಿಸುತ್ತವೆ. ಸರ್ಕಾರ ಕಲ್ಲುಗಣಿಗಾರಿಕೆಗೆ ನೀಡಿರುವಂತಹ ಅನುಮತಿಯನ್ನು ಕೂಡಲೇ ಹಿಂಪಡೆದು ಈ ಭಾಗದ ರೈತರಿಗೆ, ವಿದ್ಯಾರ್ಥಿಗಳಿಗೆ, ಸ್ಥಳೀಯರಿಗೆ ಅನುಕೂಲ ಮಾಡಿಕೊಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.
Related Articles
Advertisement
ತಹಶೀಲ್ದಾರ್ ನಹೀದ್ ಜಮ್‌ಜಮ್ ಅವರು ಭೇಟಿ ಕೊಟ್ಟು ರೈತರಿಂದ ಮನವಿ ಪತ್ರ ಸ್ವೀಕರಿಸಿ ನಂತರ ಮಾತನಾಡಿದ ಅವರು, ಎಲೆರಾಂಪುರ ಮತ್ತು ನೀಲಗೊಂಡನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದು ಮೇಲಾಧಿಕಾರಿಗಳ ಗಮನಕ್ಕೆ ತರುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಂಗನಹಳ್ಳಿ ಕಾಶಿ ಅನ್ನಪೂರ್ಣೆಶ್ವರಿ ಸಂಸ್ಥಾನದ ಶ್ರೀ ಬಸವಲಿಂಗ ಮಹಾಸ್ವಾಮಿಗಳು, ಹನುಮಂತಪುರದ ನಾಗೇಂದ್ರ ಮಹಾಸ್ವಾಮಿಗಳು, ಕೋಳಾಲ ಜಿಪಂ ಸದಸ್ಯ ಶಿವರಾಮಯ್ಯ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಅಶ್ವತ್ಥ್ ನಾರಾಯಣ್, ಅರಕೆರೆ ಶಂಕರ್, ಎಪಿಎಂಸಿ ಅಧ್ಯಕ್ಷ ವೆಂಕಟೇಶ್ ಮೂರ್ತಿ, ಬೋರಣ್ಣ, ನೀಲಗೊಂಡನಹಳ್ಳಿ ಮಾಜಿ ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ಕಿರಣ್‌ಕುಮಾರ್, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಶ್ರೀನಿವಾಸ್, ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಮೂರ್ತಿ, ಸುರೇಶ್, ತಿಲಕ್, ರಮ್ಯ, ಹನುಮಂತರಾಜು, ಮಂಗಳಗೌರಮ್ಮ, ವೆಂಕಟೇಶ್ ರೈತ ಮುಖಂಡರುಗಳು, ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಹಾಜರಿದ್ದರು.