Advertisement

ಕೊರಟಗೆರೆ: ಟ್ರ್ಯಾಕ್ಟರ್ ಢಿಕ್ಕಿಯಾಗಿ ಮಹಿಳೆ ದಾರುಣ ಸಾವು

10:02 PM Jan 13, 2023 | Team Udayavani |

ಕೊರಟಗೆರೆ: ಟ್ರ್ಯಾಕ್ಟರ್ ಢಿಕ್ಕಿಯಾಗಿ ಮಹಿಳೆ ದಾರುಣ ಸಾವನ್ನಪ್ಪಿರುವ ಅವಘಡ ಹೊಳವನಹಳ್ಳಿ ಬಳಿ ಶುಕ್ರವಾರ ನಡೆದಿದೆ.

Advertisement

ಚಾಲಕ ವೇಗವಾಗಿ ಮತ್ತು ಅಜಾಗರೂಕತೆಯಿಂದ ಟ್ರಾಕ್ಟರ್ ಚಾಲನೆ ಮಾಡಿಕೊಂಡು ಬಂದು ಢಿಕ್ಕಿ ಹೊಡೆದ ಪರಿಣಾಮ ಹೊನ್ನಾರಮ್ಮ ದೇವಸ್ಥಾನಕ್ಕೆ ಹೋಗಿ ಹಿಂದಿರುಗುತ್ತಿದ್ದ ಸಿದ್ದಮ್ಮ(45) ಮೃತಪಟ್ಟಿದ್ದಾರೆ.

ಸಿದ್ದಮ್ಮ ಸಂಬಂಧಿಕರ ಮನೆಗೆ ಬಂದಿದ್ದು ದೇವಸ್ಥಾನಕ್ಕೆ ಹೋಗಿ ಬರುವಾಗ ದುರ್ಘಟನೆ ನಡೆದಿದೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ಚೇತನ್ ಕುಮಾರ್ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next