ಕೊರಟಗೆರೆ: ದ್ವಿಚಕ್ರ ವಾಹನ ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ ಅವಘಡ ಶುಕ್ರವಾರ ಬೆಂಗಳೂರು – ಮಧುಗಿರಿ ರಾಜ್ಯ ಹೆದ್ದಾರಿಯ ಕೋಳಾಲ ಹೋಬಳಿಯ ಚಿಕ್ಕ ಪಾಲನಹಳ್ಳಿ ಗೇಟ್ ಬಳಿ ನಡೆದಿದೆ.
ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಹಾಗೂ ಹಿಂಬದಿ ಸವಾರ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತ ದುರ್ದೈವಿಗಳು ತಾಲ್ಲೂಕಿನ ಕೋಳಾಲ ಹೋಬಳಿಯ ಎ.ವೆಂಕಟಾಪುರದ ಗ್ರಾಮದ ಲೋಕೇಶ್(20) ಹಿಂಬದಿ ಸವಾರ ನರೇಂದ್ರ(35) ಎಂದು ತಿಳಿದು ಬಂದಿದೆ.
ಆಟೋದಲ್ಲಿ ಚಿಕಿತ್ಸೆಗಾಗಿ ಕೊರಟಗೆರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾಸ್ಪತ್ರಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆ ಮೇರೆಗೆ ಸಂಜಯ್ ಗಾಂಧಿ ಆಸ್ಪತ್ರೆಗೆ ಹೋಗುವಾಗ ಮಾರ್ಗ ಮದ್ಯೆ ನೆಲಮಂಗಲ ಟೋಲ್ ಹತ್ತಿರ ನರೇಂದ್ರ ಮೃತಪಟ್ಟಿರುತ್ತಾನೆ ಎಂದು ತಿಳಿದುಬಂದಿದೆ.
ಅಪಘಾತಕ್ಕೆ ಕಾರಣನಾದ ಕಾರು ಚಾಲಕನ ಮೇಲೆ ಕೋಳಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಭಂದ ಘಟನಾ ಸ್ಥಳಕ್ಕೆ ಕೊರಟಗೆರೆ ಸಿಪಿಐ ಸಿದ್ದರಾಮೇಶ್ವರ ಹಾಗೂ ಕೋಳಾಲ ಪಿಎಸ್ಐ ಮಹಾಲಕ್ಷ್ಮಮ್ಮ ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.