ಕೊರಟಗೆರೆ: ಬಿಜೆಪಿ ಪಕ್ಷದ ಸಂಕಲ್ಪ ರಥಯಾತ್ರೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಭೇಟಿ ಕೊಡುವ ಮುನ್ನ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಇಬ್ಬರು ಟಿಕೆಟ್ ಆಕಾಂಕ್ಷಿಗಳ ನಡುವಿನ ಕಿತ್ತಾಟದಿಂದ ಭಿನ್ನಮತ ಸ್ಪೋಟಗೊಂಡ ಘಟನೆ ಕೊರಟಗೆರೆ ಬೈಪಾಸ್ ಬಳಿ ನಡೆದಿದೆ.
ಕೊರಟಗೆರೆ ಪಟ್ಟಣದಲ್ಲಿ ಬಿಜೆಪಿ ಪಕ್ಷ ಏರ್ಪಡಿಸಿದ್ದ ವಿಜಯ ಸಂಕಲ್ಪ ರಥಯಾತ್ರೆಗೆ ಸಿದ್ದತೆಗೊಂಡು ರಾಜ್ಯ ಮುಖ್ಯಮಂತ್ರಿಗಳ ಆಗಮನಕ್ಕಾಗಿ ಕಾಯುತ್ತಿದ್ದ ಸಂದರ್ಭಧಲ್ಲಿ ಕೊರಟಗೆರೆ ವಿಧಾನ ಸಭಾ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಗಳಾದ ಡಾ.ಲಕ್ಷ್ಮೀಕಾಂತ್ ಮತ್ತು ಅನಿಲ್ ಕುಮಾರ್ ನಡುವೆ ಮಾತಿನ ಚಕಮಕಿ ನಡೆಯಿತು.
ವಿಜಯ ರಥಯಾತ್ರೆ ಕಾರ್ಯಕ್ರಮಕ್ಕೆ ಆಗಮಿಸುವ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದತಂತೆ ಸಚಿವರುಗಳ ಸ್ವಾಗತಕ್ಕೆ ಕಟ್ಟಿದ್ದ ಫ್ಲಕ್ಸ್ ಗಳ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಭಿನ್ನಮತ ಹೊರ ಬಂದು ಇಬ್ಬರ ಮಾತಿನ ಚಕಮುಕಿ ಸಾರ್ವಜನಿಕರಿಗೆ ಮನರಂಜನೆಯಾಗಿತ್ತು. ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಳಿಸಲಾಯಿತು. ಟಿಕೆಟ್ ಆಕಾಂಕ್ಷಿಗಳ ಕಿತ್ತಾಟದ ವಿಡಿಯೋಗಳು ವೈರಲ್ ಆಗಿವೆ.