Advertisement

ಕೊರಟಗೆರೆ : ಗೂಡ್ಸ್ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

08:27 PM Jun 25, 2022 | Team Udayavani |

ಕೊರಟಗೆರೆ : ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಕಸಬಾ ಹೋಬಳಿಯ ಕಲ್ಲುಗುಟ್ಟರಹಳ್ಳಿ ಗೆಟ್ ಬಳಿ ನಡೆದಿದೆ.

Advertisement

ರಾಜಣ್ಣ ((52)ಮೃತಪಟ್ಟ ದುರ್ದೈವಿಯಾಗಿದ್ದು. ಕಲ್ಲುಗುಟ್ಟರಹಳ್ಳಿ ಗೆಟ್ ಬಳಿಯಲ್ಲಿ ಗೂಡ್ಸ್ ವಾಹನದ ಚಾಲಕ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಎದುರುಗಡೆ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದಾನೆ ಪರಿಣಾಮ ಬೈಕ್ ಸವಾರ ರಸ್ತೆಯ ಮೇಲೆ ಬಿದ್ದು ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಈ ಸಂಭಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ನಾಗರಾಜು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಬೆನ್ನಟ್ಟಿದ ಬೀದಿನಾಯಿಗಳ ಹಿಂಡು : ತಪ್ಪಿಸಿಕೊಳ್ಳುವ ಭರದಲ್ಲಿ ಬಿದ್ದು ಪತ್ರಕರ್ತನಿಗೆ ಗಾಯ

Advertisement

Udayavani is now on Telegram. Click here to join our channel and stay updated with the latest news.

Next