Advertisement

ಕೊರಟಗೆರೆ : ದೇವಸ್ಥಾನದಲ್ಲಿ ಕಳವುಗೈದ ಆರೋಪಿಯ ಬಂಧನ, ಸೊತ್ತು ವಶ

10:04 PM Jul 30, 2022 | Team Udayavani |

ಕೊರಟಗೆರೆ: ತಾಲ್ಲೂಕಿನ ಕೋಳಾಲ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಶನಿವಾರ ಮುಂಜಾನೆ 4ಗಂಟೆಯ ಸಮಯದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಘಟನೆ ನಡೆದಿದೆ.

Advertisement

ಠಾಣೆಯ ಪಿಎಸ್ಐ ಮಹಾಲಕ್ಷ್ಮಮ್ಮ ಶನಿವಾರ ಮುಂಜಾನೆ ಗಸ್ತಿನಲ್ಲಿದ್ದ ವೇಳೆಯಲ್ಲಿ ಒಂಟಿಯಾಗಿ ನಿಂತಿದ್ದ ವ್ಯಕ್ತಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ ವೇಳೆ ಎರಡೂವರೆ ತಿಂಗಳಿ ಹಿಂದೆ ಠಾಣಾ ವ್ಯಾಪ್ತಿಯ ನರಸಾಪುರ ಗ್ರಾಮದ ಮಾರಿಕಾಂಬಾ ದೇವಸ್ಥಾನ ಹಾಗೂ ಮೂಡ್ಲಪಾಳ್ಯ ಗ್ರಾಮದ ಶ್ರೀ ಜುನ್ನಾಗರದಮ್ಮ ದೇವಸ್ಥಾನದಲ್ಲಿ ಕಳ್ಳತನ ನಡೆಸಿರುವ ಕುರಿತು ಮಾಹಿತಿ ನೀಡಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ತೊಂಡೇಬಾವಿ ಹೋಬಳಿಯ ಅಲ್ಲಿಪುರ ಗ್ರಾಮದ ವಾಸಿಯಾದ, ಚಿಂದಿ ಆಯುವ ಕೆಲಸ ಮಾಡುತ್ತಿದ್ದ ಆರೋಪಿ ಸುರೇಶ್(35) ಬಂಧಿತ ಆರೋಪಿಯಾಗಿದ್ದಾನೆ.

ಆರೋಪಿಯ ವಿಚಾರಣೆ ವೇಳೆ 51,750 ರೂ ಬೆಲೆಯ14.44 ಚಿನ್ನದ ಒಡವೆಗಳು ಹಾಗೂ 137 ಗ್ರಾಂ ತೂಕದೆರಡು ಜೊತೆ ಬೆಳ್ಳಿ ಕಾಲು ಚೈನ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಸಂಬಂಧ ಕೋಳಾಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ಮಹಾಲಕ್ಷ್ಮಮ್ಮ ಹಾಗೂ ಸಿಬ್ಬಂದಿಗಳಾದ ಮುಖ್ಯ ಪೇದೆ ಮೋಹನ್ ಕುಮಾರ್,ಮಧುಕುಮಾರಗಳ ತಂಡವನ್ನು ಜಿಲ್ಲಾ ಪೋಲೀಸ್ ಅಧೀಕ್ಷಕರಾದ ರಾಹುಲ್ ಕುಮಾರ್ ಶಹಾ ಪುರ್ ವಾಡ್ ಹಾಗೂ ಹೆಚ್ಚುವರಿ ಪೋಲೀಸ್ ಅಧೀಕ್ಷಕರಾದ ಉದೇಶ್ ರವರು ತಂಡವನ್ನು ಅಭಿನಂದಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next