ಕೊರಟಗೆರೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಯ ಕಾರ್ಯಕ್ರಮವನ್ನು ತಾಲೂಕು ಮಟ್ಟದ ಅಧಿಕಾರಿಗಳ ಸಹಯೋಗದೊಂದಿಗೆ ಗ್ರಾಮ ವಾಸ್ತವ್ಯವನ್ನು ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದೇನಹಳ್ಳಿ ಮಜರೆ ಗಿಡಚಿಕ್ಕನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ತಾಲೂಕಿನ ಗ್ರೇಡ್ 2 ತಹಶೀಲ್ದಾರ್ ನರಸಿಂಹಮೂರ್ತಿ ಜ್ಯೋತಿ ಬೆಳಗುವ ಮುಖಾಂತರ ಉದ್ಘಾಟಿಸಿದರು..
ಗಿಡ ಚಿಕ್ಕನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ನರಸಿಂಹಮೂರ್ತಿ, ಗ್ರಾಮದ ಸಮಸ್ಯೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿದರು ಕಂದಾಯ ಇಲಾಖೆಯು ಮನಸ್ವಿನಿ ಹಾಗೂ ಸಂಧ್ಯಾ ಸುರಕ್ಷಾ ಯೋಜನೆಯಡಿ ಹಾಗೂ ಇಂದಿರಾಗಾಂಧಿ ವೃದ್ಧಾಪ್ಯ ವೇತನ ಯೋಜನೆ ಅಡಿಯಲ್ಲಿ 20 ಫಲಾನುಭವಿಗಳಿಗೆ ಪಿಂಚಣಿ ಆದೇಶದ ಪ್ರತಿಯನ್ನು ವಿತರಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಬಿಕಾ. ಸಿ ಎಸ್. ಮೂರು ಜನ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಿದರು
ಆರೋಗ್ಯ ಇಲಾಖೆಯ ವತಿಯಿಂದ ಕೋವಿಡ್ ಲಸಿಕೆಯನ್ನು ಹಾಕಲಾಯಿತು. ಆರೋಗ್ಯ ತಪಾಸಣೆಯನ್ನು ಸಹ ನಡೆಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಎಲ್ಲ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯಿಂದ ನೀಡುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಸದುಪಯೋಗ ಪಡಿಸಿಕೊಳ್ಳುವಂತೆ ಮಾಹಿತಿ ನೀಡಿದರು ನಿಮಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆಯೂ ನಮ್ಮ ಗಮನಕ್ಕೆ ತನ್ನಿ ನಾವು ಸೂಕ್ತ ಕ್ರಮ ಕೈಗೊಂಡು ಸಮಸ್ಯೆಯನ್ನು ಪರಿಹರಿಸುತ್ತೇವೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಅರಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಕೃಷ್ಣಯ್ಯ ಉಪಾಧ್ಯಕ್ಷೆ ಪುಟ್ಟಮ್ಮ ಪಿಡಿಒ ಸುರೇಶ್ ಗ್ರಾಮ ಪಂಚಾಯಿತಿಯ ಸದಸ್ಯರು ಸಿಬ್ಬಂದಿ ವರ್ಗ ಹಾಜರಿದ್ದರು
ತಾಲ್ಲೂಕು ಪಂಚಾಯತಿಯ ಅಧಿಕಾರಿಗಳು ,ಸಹಾಯಕ ಕೃಷಿ ನಿರ್ದೇಶಕರು, ತಾಲ್ಲೂಕು ಆರಕ್ಷಕ ಸಿಬ್ಬಂದಿ ,ಬೆಸ್ಕಾಂ ಇಲಾಖೆ ,ಆರೋಗ್ಯ ಇಲಾಖೆ ,ಪಶು ವೈದ್ಯಕೀಯ ಇಲಾಖೆ ,ಕುಡಿಯುವ ನೀರಿನ ಸರಬರಾಜು ಇಲಾಖೆ, ಅರಣ್ಯ ಇಲಾಖೆ ,ಪಂಚಾಯತ್ ರಾಜ್ ಇಲಾಖೆ ,ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ,ರೇಷ್ಮೆ ಇಲಾಖೆ ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ,ಕಂದಾಯ ಇಲಾಖೆಯ ಒಳವನಹಳ್ಳಿ ಹೋಬಳಿ ಉಪತಹಸೀಲ್ದಾರ್, ರಾಜಸ್ವ ನಿರೀಕ್ಷಕರು ಹೋಬಳಿಯ ಎಲ್ಲಾ ಗ್ರಾಮ ಲೆಕ್ಕಿಗರು ಹಾಗೂ ಗ್ರಾಮ ಸಹಾಯಕರು ,ಇನ್ನೂ ಅನೇಕ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಒಟ್ಟು 35 ಇಲಾಖೆಗಳು ಒಂದೇ ವೇದಿಕೆಯಲ್ಲಿ ಬಂದು ಸಾರ್ವಜನಿಕರ ಕುಂದುಕೊರತೆಗಳನ್ನು ಗ್ರಾಮವಾಸ್ತವ್ಯ ಕಾರ್ಯಕ್ರಮದ ಮುಖಾಂತರ ಹಾಗೂ ಮಾಹಿತಿಯನ್ನು ನೀಡುವ ಮುಖಾಂತರ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಹಿತಿಯನ್ನು ನೀಡಿದರು.