Advertisement

ಕೊರಟಗೆರೆ: ಕೊಚ್ಚಿ ಹೋಗಿದ್ದ ವೃದ್ಧೆಯ ಶವ ಪತ್ತೆ

06:20 PM Aug 04, 2022 | Team Udayavani |

ಕೊರಟಗೆರೆ: ತಾಲೂಕಿನ ಕಸಬಾ ಹೋಬಳಿಯ ಕುರುಡಗಾನಹಳ್ಳಿ ಗ್ರಾಮದಲ್ಲಿ ಹಳ್ಳದಲ್ಲಿ  ಕೊಚ್ಚಿ ಹೋಗಿದ್ದ ವೃದ್ಧೆಯ ಶವ ಪತ್ತೆಯಾಗಿದೆ.

Advertisement

ಮೃತ ದುರ್ದೈವಿ ಲಕ್ಷ್ಮಮ್ಮ(70 ) ಎನ್ನುವವರಾಗಿದ್ದು, ಜಮೀನಿಗೆ ಕೆಲಸಕ್ಕೆ ಹೋಗಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸಾಗುವಾಗ ಮನೆಯ ಹತ್ತಿರವಿದ್ದ ಹಳ್ಳದಲ್ಲಿ ಭಾರಿ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿದ್ದರು.  ಸ್ವಲ್ಪ ದೂರದಲ್ಲಿ ಶವವಾಗಿ ಸಿಕ್ಕಿದ್ದಾರೆ.

ಕೊರಟಗೆರೆ ಪೊಲೀಸ್ ಇನ್ಸ್‌ಪೆಕ್ಟರ್ ಸಿದ್ದರಾಮೇಶ್ವರ ಹಾಗೂ ಸಿಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next