Advertisement
ಕೊರಟಗೆರೆಯಲ್ಲಿ ರೈತ ಚೈತನ್ಯ ಮತ್ತು ರೈತ ಸಂಕ್ರಾಂತಿ ಸಂವಾದ ಕಾರ್ಯಕ್ರಮವು ಯಶಸ್ವಿಯಾಗಿದೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ತಿಳಿಸಿದರು.
Related Articles
Advertisement
ಪುರವಾರ ರೈತ ಗೋವರ್ಧನ್ ಮಾತನಾಡಿ ಕೃಷಿ ಬೆಳೆಗೆ ಸರಕಾರ ಬೆಳೆವಿಮೆ ಕಟ್ಟಿಸಿಕೊಂಡಿದೆ. ಮಳೆರಾಯನ ಆರ್ಭಟಕ್ಕೆ ಕೃಷಿ ಬೆಳೆಯು ಸಂಪೂರ್ಣ ನಷ್ಟವಾಗಿದೆ. ಬೆಳೆವಿಮೆ ಯೋಜನೆಯಿಂದ ರೈತರಿಗೆ ಅನುಕೂಲ ಆಗುತ್ತಿಲ್ಲ.ಕೊರಟಗೆರೆಯ ರೈತರಿಗೆ ಲಕ್ಷಾಂತರ ರೂ ಬೆಳೆ ನಷ್ಟವಾದ್ರು ಬೆಳೆ ವಿಮೆಯ ಹಣವೇ ಬರುತ್ತೀಲ್ಲ. ರೈತರು ಯಾವ ಇಲಾಖೆಗೆ ಕೇಳಬೇಕು ಎಂಬುದೇ ಗೋತ್ತಿಲ್ಲ ಎಂದು ತಿಳಿಸಿದರು. ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಮಹಾಲಿಂಗಪ್ಪ, ಜೆಡಿಎಸ್ ಕಾರ್ಯಾಧ್ಯಕ್ಷ ನರಸಿಂಹರಾಜು, ಕಾರ್ಯದರ್ಶಿ ಲಕ್ಷ್ಮಣ್, ವಕ್ತಾರ ಲಕ್ಷ್ಮೀಶ್, ಜಿಪಂ ಸದಸ್ಯ ಶಿವರಾಮಯ್ಯ, ಮುಖಂಡರಾದ ಸಿದ್ದಮಲ್ಲಪ್ಪ, ಕಾಮರಾಜು, ವೀರಕ್ಯಾತರಾಯ, ಲಕ್ಷ್ಮೀಕಾಂತ, ರವಿವರ್ಮ, ಸಾಕಣ್ಣ, ನಾಗರಾಜು, ರಮೇಶ್, ಸತೀಶ್, ಲಕ್ಷ್ಮೀನರಸಪ್ಪ ಸೇರಿದಂತೆ ಇತರರು ಇದ್ದರು. ರೈತರ ಪ್ರಶ್ನೆಗಳಿಗೆ ಕುಮಾರಸ್ವಾಮಿ ಉತ್ತರ
ವಿಧಾನಸಭೆಯಲ್ಲಿ ಹತ್ತಾರು ಸಲ ಬೆಳೆವಿಮೆಯ ಬಗ್ಗೆ ಚರ್ಚಿಸಲಾಗಿದೆ. ಕೇಂದ್ರ ಸರಕಾರದ ಖಾಸಗಿ ಕಂಪನಿಯ ಬೆಳೆವಿಮೆ ಯೋಜನೆಯು ರೈತರಿಗೆ ದಾರಿ ತಪ್ಪಿಸುವ ಕೆಲಸ ಮಾಡ್ತಿದೆ. ರಾಗಿ ಖರೀದಿ ಕೇಂದ್ರಗಳಿಂದ ರೈತರಿಗೆ ಅನುಕೂಲ ಆಗುತ್ತಿಲ್ಲ. ರೈತರ ಬೆಳೆಗಳಿಗೆ ತಕ್ಷಣ ಮಾರಾಟ ಹಣ ನೀಡಬೇಕಿದೆ. ಕರ್ನಾಟಕದ ರೈತ ಯಾವುದೇ ಕಾರಣಕ್ಕೂ ಸಂಕಷ್ಟಕ್ಕೆ ಸಿಲುಕಬಾರದು. ರಾಜ್ಯ ಸರಕಾರದಿಂದಲೇ ಬೆಳೆವಿಮೆ ಯೋಜನೆ ಜಾರಿಗೊಳಿಸುತ್ತೇನೆ ಎಂದು ಕೊರಟಗೆರೆ ಕ್ಷೇತ್ರದ ರೈತರ ಪ್ರಶ್ನೆಗಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಉತ್ತರ ನೀಡಿದರು.