Advertisement

Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

07:42 PM May 06, 2024 | Team Udayavani |

ಕೊರಟಗೆರೆ: ಹಲವು ಖಾಸಗಿ ಫೈನಾನ್ಸ್ ಗಳಲ್ಲಿ 12 ಲಕ್ಷ ರೂ.ಗೂ ಹೆಚ್ಚು ಸಾಲ ಮಾಡಿ, ತೀರಿಸಲಾಗದೆ ಮನನೊಂದ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗಾ ಹೋಬಳಿಯ ಕಬ್ಬಗೆರೆ ಗೊಲ್ಲರಹಟ್ಟು ಗ್ರಾಮದಲ್ಲಿ ನಡೆದಿದೆ.

Advertisement

ಸಾಲದ ಬಾಧೆಗೆ ಹೆದರಿ ಆತ್ಮಹತ್ಯೆಗೆ ಶರಣಾದ ರೈತ ರಾಜಣ್ಣ (38) ಎಂದೂ ಗುರುತಿಸಲಾಗಿದ್ದು ಜಮೀನಿನಲ್ಲಿ ಬೋರ್ವೇಲ್ ಕೊರೆಸಲು ರೈತ ರಾಜಣ್ಣ ಹಲವು ಫೈನಾನ್ಸ್ ಗಳಲ್ಲಿ 12 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು ಜಮೀನಿನಲ್ಲಿ 5 ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಸಿದ್ದು ನೀರು ಸಿಗದ ಕಾರಣ ಮನನೊಂದಿದ್ದರು ಎಂದು ಹೇಳಲಾಗಿದೆ.

ಸ್ನೇಹಿತರ ಬಳಿಯೂ ಸಾಲ ಪಡೆದಿದ್ದು, ಭಾನುವಾರ ತಡರಾತ್ರಿ ತನ್ನ ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸ್ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎರಡು ವರ್ಷದಿಂದ ಮಳೆ ಇಲ್ಲದೆ ಬೆಳೆಗಳೆಲ್ಲವೂ ನಾಶವಾಗಿ ರೈತ ಮಾಡಿರುವ ಸಾಲ ತೀರಿಸಲಾಗದೆ, ನೇಣು ಹಾಕಿಕೊಳ್ಳುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿವೆ. ಹಣ ವಸೂಲಿಗೆ ಬರುತ್ತಿರುವ ಮೈಕ್ರೋ ಫೈನಾನ್ಸ್ ಹಾಗೂ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಬೇಕು ಮಳೆ ಇಲ್ಲದೆ ಬೆಳೆ ಇಲ್ಲದೆ ರೈತ ಸಾಲವನ್ನು ಹೇಗೆ ಕಟ್ಟುತ್ತಾನೆ. ಈ ಘಟನೆಗಳ ಬಗ್ಗೆ ಕೊಡಲೇ ಸರ್ಕಾರ ಗಮನ ಹರಿಸಬೇಕು, ರೈತರ ಪ್ರಾಣವನ್ನು ಉಳಿಸಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಸಿದ್ದರಾಜು ಆಗ್ರಹಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next