Advertisement

Koratagere: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಜಾಥಾ

06:12 PM Feb 16, 2024 | Team Udayavani |

ಕೊರಟಗೆರೆ: ಕಾರ್ಮಿಕರಿಗೆ ಕನಿಷ್ಠ ಕೂಲಿ, ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಶುಕ್ರವಾರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ತಾಲೂಕು ಕಚೇರಿಯವರೆಗೆ ಸಂಯುಕ್ತ ಹೋರಾಟ-ಕರ್ನಾಟಕ ಮತ್ತು ಅಂಗನವಾಡಿ ನೌಕರರ ಸಂಘದಿಂದ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜಾಥಾ ನಡೆಸಿ ಪ್ರತಿಭಟನಾಕಾರರು ಅಕ್ರೋಶ ವ್ಯಕ್ತಪಡಿಸಿದರು. ನಂತರ ತಾಲೂಕು ಕಚೇರಿಯ ಬಳಿ ಪ್ರತಿಭಟನೆ ನಡೆಸಿ ಗ್ರೇಡ್-2 ತಹಶೀಲ್ದಾರ್ ನರಸಿಂಹಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

Advertisement

ರೈತ ಸಂಘದ ತಾ.ಅಧ್ಯಕ್ಷ ರಂಗಹನುಮಯ್ಯ ಮಾತನಾಡಿ, ರೈತರು ಬೆಳೆದ ಬೆಂಬಲ ಬೆಲೆ ನೀಡದೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿದೆ, ಜೊತೆಗೆ ಕೃಷಿಗೆ ಅವಶ್ಯಕ ವಸ್ತುಗಳ ಬೆಲೆಯು ದುಬಾರಿಯಾಗಿದ್ದು ಕಷ್ಟಪಟ್ಟು ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗದೆ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ ದೇಶದ ಜನರಿಗೆ ಅನ್ನ ನೀಡುವ ರೈತನಿಗೆ ಭೂಸ್ವಾಧೀನ ದಾಖಲೆಯ ಹಕ್ಕು ಪತ್ರಗಳನ್ನು ನೀಡುತ್ತಿಲ್ಲ ಎಂದು ಆರೋಪ ಮಾಡಿದರು.

ಡಾ.ಸ್ವಾಮಿನಾಥನ್ ಶಿಫಾರಸ್ಸಿನಂತೆ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಕಾನೂನು ಕೂಡಲೇ ಜಾರಿಗೊಳಿಸಬೇಕು. ಸರ್ಕಾರ ಸಂಪೂರ್ಣವಾಗಿ ತನ್ನ ನೀತಿಗಳನ್ನು ಬದಲಾಯಿಸಬೇಕೆಂದೂ ಒತ್ತಾಯಿಸಿ ದೇಶದ ಎಲ್ಲಾ ರೈತರು, ಕೂಲಿಕಾರರು, ಕಾರ್ಮಿಕರು ಒಂದಾಗಿ ಚಳುವಳಿ ನಡೆಸುತ್ತಿದ್ದಾರೆ. ದೆಹಲಿಯಲ್ಲಿ ಚಳುವಳಿಗಳ ಮೇಲೆ ಪೋಲಿಸ್ ದಬ್ಬಾಳಿಕೆ ಮಾಡಿರುವುದನ್ನು ಖಂಡಿಸಿ ರೈತರ ಮತ್ತು ಕೂಲಿಗಾರರು, ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನೆ ಮೂಲಕ ಒತ್ತಾಯ ಮಾಡುತ್ತಿದ್ದು, ಕೂಡಲೇ ಬೇಡಿಕೆಗಳಿಗೆ ಸ್ಪಂದಿಸದೆ ಹೋದರೆ ಉಗ್ರವಾಗಿ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ರೈತ ಸಂಘದ ತಾ.ಕಾರ್ಯದರ್ಶಿ ಶಬ್ಬೀರ್ ಬಾಷಾ ಮಾತನಾಡಿ, ಹಸಿದ ಹೊಟ್ಟೆಗೆ ಅನ್ನ ಕೊಡೋ ರೈತ ಸವಲತ್ತಿಗಾಗಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡಿದರೆ ದೇಶದ ಆಹಾರೋತ್ಪಾದನೆ ಕುಸಿಯುತ್ತದೆ ಎಂಬ ಸಾಮಾನ್ಯ ಜ್ಞಾನವು ಸರ್ಕಾರಕ್ಕಿಲ್ಲ, ಈಗಿನ ರಣಹೇಡಿ ಸರ್ಕಾರಗಳು ರೈತರು ರೈತರಾಗಿ ಬದುಕುವ ಸವಲತ್ತಿಗಾಗಿ ಪ್ರತಿಭಟಿಸುವ ಸಹಜ ಹಕ್ಕುಗಳನ್ನು ಬಲ ಪ್ರಯೋಗದ ಮೂಲಕ ಹತ್ತಿಕ್ಕುವ ಕೆಲಸ ಮಾಡುತ್ತಿವೆ. ಒಂದು ಕಡೆ ಚೌದರಿ ಚರಣ್ ಸಿಂಗ್, ಸ್ವಾಮಿನಾಥನ್ ರವರಿಗೆ ಭಾರತ ರತ್ನ ನೀಡುವವರು ಇನ್ನೊಂದು ಕಡೆ ಅವರ ಆಶಯ ವರದಿಗಳನ್ನು ಜಾರಿಗೆ ತರದೆ ಮೂಲೆಗೆಸೆದಿದ್ದಾರೆ ಎಂದು ಕಿಡಿಕಾರಿದರು.

ತಾಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವನಜಾಕ್ಷಿ ಮಾತನಾಡಿ, ಆಹಾರ, ಆರೋಗ್ಯ, ಶಿಕ್ಷಣ ಮತ್ತು ಪೌಷ್ಠಿಕ ಆಹಾರಕ್ಕಾಗಿರುವ ಯೊಜನೆಗಳಾದ ಐಸಿಡಿಎಸ್, ಎಮ್‌ಡಿಎಮ್, ಐಸಿಪಿಎಸ್, ಎಮ್‌ಎನ್‌ಆರ್‌ಇಜಿ ಮುಂತಾದ ಯೋಜನೆಗಳನ್ನು ಖಾಯಂ ಮಾಡುವ ಮುಖಾಂತರ ಈ ಹಕ್ಕುಗಳನ್ನು ಸಾರ್ವತ್ರಿಕಗೊಳಿಸಬೇಕು.3ರಿಂದ6 ವರ್ಷದೊಳಗಿನ ಮಕ್ಕಳಿಗೆ ಉಚಿತ ಕಡ್ಡಾಯ ಮತ್ತು ಸಾರ್ವತ್ರಿಕವಾಗಿ ಪುರ್ವ ಪ್ರಾಥಮಿಕ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲಲಿಯೆ ಕೊಡಲು ರೂಪಿಸಿ ಎನ್‌ಇಪಿ ನಿಲ್ಲಿಸಬೇಕು ಎಂದು ಹೇಳಿದರು.

Advertisement

49 ವರ್ಷಗಳಿಂದ ದುಡಿಯುತ್ತಿರುವ ಅಂಗನವಾಡಿ ನೌಕರರು 20 ವರ್ಷಗಳಿಂದ ದುಡಿಯುವ ಬಿಸಿಯೂಟ ನೌಕರರಿಗೆ, ಆಶಾ ಮತ್ತು ಇತರೆ ಸಿಬ್ಬಂದಿಗಳಿಗೆ 31 ಸಾವಿರ ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳನ್ನು 10 ಸಾವಿರ ರೂ. ಪಿಂಚಣಿ ಕೊಡಬೇಕು 29 ಕಾಮಿಕ ಕಾನೂನುಗಳ ಸಂಹಿತೆಗಾಗಿ ಮಾಡಿರುವುದನ್ನು ಕೈಬಿಟ್ಟು ಕಾರ್ಮಿಕ ಪರವಾದ ನೀತಿಗಳನ್ನು ಜಾರಿ ಮಾಡಬೇಕು ಎಂದು ಅಗ್ರಹ ಮಾಡಿದರು.

ಈ ಪ್ರತಿಭಟನೆಯಲ್ಲಿ ರೈತ ಸಂಘದ ಚಿಕ್ಕರಂಗಯ್ಯ, ದೇವರಾಜ್, ಅಡಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಕಮಲ, ಸಂಚಾಲಕರಾದ ಆದಿಲಕ್ಷ್ಮೀ , ಬಿಸಿಯೂಟ ನೌಕರರಾದ ನಾಗರತ್ನ, ನಂಜಮ್ಮ, ಗೀತಮ್ಮ, ಸುಮ, ಮಹಾಲಕ್ಷ್ಮೀ, ಶಾಂತಮ್ಮ, ಗಿರಿಜಮ್ಮ, ನವರತ್ನ ಸೇರಿದಂತೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ಬಿಸಿಯೂಟಕ್ಕೆ ಬಳಸುವ ಪದಾರ್ಥ ಗುಣಮಟ್ಟವಿಲ್ಲ
ಇತ್ತೀಚಿಗೆ ಕೆಲವು ತಿಂಗಳುಗಳಿಂದ ಅಂಗನವಾಡಿ ಮತ್ತು ಶಾಲೆಗಳಲ್ಲಿ ತಯಾರಿಸುವ ಬಿಸಿಊಟಕ್ಕೆ ಬಳಸುವಂತಹ ಪದಾರ್ಥಗಳು ಗುಣಮಟ್ಟವಿಲ್ಲ ಎಂದು ಬಿಸಿಯೂಟದ ನೌಕರರು ಮನವಿಯನ್ನು ನೀಡಿದ್ದು ಈ ವಿಚಾರವನ್ನು ಮೇಲಿನ ಅಧಿಕಾರಿಗಳ ಗಮನಕ್ಕೆ ತಂದು ಉತ್ತಮ ಗುಣಮಟ್ಟ ಆಹಾರ ಪದಾರ್ಥಗಳನ್ನು ವಿತರಣೆ ಮಾಡುವುದಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಂಬಿಕಾ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next