Advertisement

ಎರಡು ಕಾರುಗಳ ನಡುವೆ ಭೀಕರ ಅಪಘಾತ: ಒರ್ವ ಮಹಿಳೆ ಸಾವು, 9 ಜನರಿಗೆ ಗಂಭೀರ ಗಾಯ

09:57 PM Nov 12, 2022 | Team Udayavani |

ಕೊರಟಗೆರೆ: ತಾಲೂಕಿನ ಕಸಬಾ ಹೋಬಳಿಯ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು -ಮಧುಗಿರಿ ರಾಜ್ಯ ಹೆದ್ದಾರಿಯ ಜಿ.ನಾಗೇನಹಳ್ಳಿ ಬಳಿಯಲ್ಲಿ
ಎರಡು ಕಾರುಗಳು ಪರಸ್ಪರ ಢಿಕ್ಕಿ ಹೊಡೆದು ಒಂದು ಕಾರು ಬೆಂಕಿಗಾಹುತಿಯಾಗಿದೆ.

Advertisement

ವಿಶಾಲ್ ನ್ಯಾಚುರಲ್ ಪುಡ್ ಪ್ರಾಡಕ್ಟ್ ಪ್ಯಾಕ್ಟರಿಯ ಬಳಿ ಎರಡು ವಾಹನಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಒಬ್ಬ ಮಹಿಳೆ ಮೃತಪಟ್ಟು ಮತ್ತು 9 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಘಟನೆ ನಡೆದ ಬಳಿಕ ಕೊರಟಗೆರೆ ಪೋಲೀಸ್ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ದಾವಿಸಿ ಗಾಯಾಳುಗಳನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಸೂಕ್ತ ಪ್ರಥಮ ಚಿಕಿತ್ಸಾ ನೀಡಿ ಬಳಿಕ ಗಂಭೀರ ಸ್ವರೂಪದ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಕೊರಟಗೆರೆ ಠಾಣಾ ಪಿಎಸ್ಐ ಚೇತನ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next