Advertisement
ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಅನುಸೂಚಿತ ಮಹಿಳೆ ಮತ್ತು ಸಾಮಾನ್ಯ ವರ್ಗದ ಮಹಿಳೆಗೆ ಉಪಾಧ್ಯಕ್ಷ ಸ್ಥಾನ ನಿಗದಿಯಾಗಿತ್ತು. ಅದರಂತೆ ಪಟ್ಟಣಕ್ಕೆ 15 ವಾರ್ಡ್‍ಗಳಿದ್ದು ಇದರಲ್ಲಿ ಒಬ್ಬ ಸದಸ್ಯ ಅನರ್ಹರಾದ ಹಿನ್ನೆಲೆ 14 ಸದಸ್ಯರ ಸಮಬಲದಿಂದ ಅಧ್ಯಕ್ಷೆಯಾಗಿ ಅನಿತಾ ಉಪಾಧ್ಯಕ್ಷೆಯಾಗಿ ಉಸ್ಮಾಫಾರೀಯಾ ಆಯ್ಕೆಯಾಗಿದ್ದು ಈ ಮೂಲಕ ಕೊರಟಗೆರೆ ಕಾಂಗ್ರೆಸ್ ಭದ್ರಕೋಟೆಯೆಂದು ಸಾಬೀತು ಮಾಡಿದೆ.
Related Articles
Advertisement
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಮುಗಿದ ಬಳಿಕ ಪಟ್ಟಣದ ಅಭಿವೃದ್ಧಿಗಾಗಿ ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ, ಸದಸ್ಯ ಮಂಜುಳ ಸತ್ಯನಾರಾಯಣ್, ಪಕ್ಷೇತರವಾಗಿ ಆಯ್ಕೆಯಾಗಿದ್ದ ನಟರಾಜ್ ಸೇರಿ ಒಟ್ಟು ನಾಲ್ಕು ಮಂದಿ ಸದಸ್ಯರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗೃಹ ಸಚಿವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದು, ಸಚಿವರು ಅಭಿನಂದನೆ ಸಲ್ಲಿಸಿ ಶುಭಕೋರಿದ್ದಾರೆ. ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಪುರಸಭೆಯನ್ನಾಗಿ ಮಾಡಲಾಗುವುದು
ಕೊರಟಗೆರೆ ಪ.ಪಂಚಾಯತಿಗೆ ನೂತನ ಅಧ್ಯಕ್ಷೆಯಾಗಿ ಅನಿತಾ ಮತ್ತು ಉಪಾಧ್ಯೆಕ್ಷೆಯಾಗಿ ಉಸ್ಮಾಫಾರಿಯಾ ಆಯ್ಕೆಯಾಗಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿರುವುದು ಸಂತಸ ತಂದಿದೆ. ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಿ. ಅಧ್ಯಕ್ಷರು ಸೇರಿ ಒಟ್ಟು ನಾಲ್ಕು ಮಂದಿ ಸದಸ್ಯರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿರುವುದು ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಮುಂದಿನ ದಿನಗಳಲ್ಲಿ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ಹೇಳಿಕೆ ನೀಡಿದರು.