Advertisement

ಕೊರಟಗೆರೆ: ಲಾರಿ ಢಿಕ್ಕಿಯಾಗಿ ದ್ವಿಚಕ್ರ ಸವಾರ ಸಾವು

08:04 PM Oct 16, 2022 | Team Udayavani |

ಕೊರಟಗೆರೆ:ಬೈಪಾಸ್ ರಸ್ತೆಯಲ್ಲಿ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ನಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

Advertisement

ಕೊರಟಗೆರೆ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಅಪಘಾತ ನಡೆದಿದೆ. ನವೀನ್ ರೆಸ್ಟೋರೆಂಟ್ ವ್ಯವಸ್ಥಾಪಕ ವೆಂಕಟರಮಣಪ್ಪ(38) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ತಕ್ಷಣ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next