Advertisement

Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು

01:48 AM Dec 22, 2024 | Team Udayavani |

ಕೋಟಾ: ಜೆಇಇಗೆ ಅಭ್ಯಾಸ ನಡೆಸುತ್ತಿದ್ದ 16 ವರ್ಷದ ವಿದ್ಯಾ­ರ್ಥಿಯೊಬ್ಬ ರಾಜಸ್ಥಾನದ ಕೋಟಾದಲ್ಲಿ ಆತ್ಮಹತ್ಯೆಗೆ ಶರಣಾ­ಗಿದ್ದಾನೆ. ವಿದ್ಯಾರ್ಥಿಯು ಬಿಹಾರ ಮೂಲದವನಾದವನಾ­ಗಿದ್ದು, 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಹಾಸ್ಟೆಲ್‌ ರೂಮಿನ ಫ್ಯಾನ್‌ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸದ್ಯ ಪೊಲೀಸರು ಆತ್ಮಹತ್ಯೆ ಎಂದೇ ಪರಿಗಣಿಸಿದ್ದು, ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ವಿದ್ಯಾರ್ಥಿಯ ಸಾವಿಗೆ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದರೊಂದಿಗೆ ಕೋಟಾದಲ್ಲಿ ಈ ವರ್ಷ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ 17ಕ್ಕೇರಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next