Advertisement
ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಮೇ 31ರಂದು ಇವರಿಗೆ ಕೋಟ ಪೊಲೀಸ್ ಠಾಣೆಯಲ್ಲಿ ಸಹೋದ್ಯೋಗಿಗಳು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಈ ಸಂದರ್ಭ ಸಮ್ಮಾನ ಸ್ವೀಕರಿಸಿ ಊಟ ಮಾಡುತ್ತಿದ್ದಾಗ ಒಮ್ಮೆಲೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದರು. ತತ್‌ಕ್ಷಣ ಕೋಟ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಮೆದುಳಿನಲ್ಲಿ ವಿಪರೀತ ರಕ್ತಸ್ರಾವವಾದ ಕಾರಣ ಪರಿಸ್ಥಿತಿ ಗಂಭೀರವಾಗಿತ್ತು. ಇದೀಗ ಮೂರು ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ಶರೀರವನ್ನು ಕೋಟ ಪೊಲೀಸ್ ಠಾಣೆಯಲ್ಲಿ ಅಂತಿಮ ದರ್ಶನಕ್ಕಾಗಿ ಇರಿಸಲಾಗಿತ್ತು. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ಹಾಗೂ ಕೋಟ ಠಾಣಾಧಿಕಾರಿ ರಾಜಶೇಖರ್ ಮಂದಲಿ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.