Advertisement
ಸಂಘಟಕರಲ್ಲಿ ಓರ್ವರಾದ ಟಿ. ಮಂಜುನಾಥ ಗಿಳಿಯಾರು ಪ್ರಾಸ್ತಾವಿಕ ವಾಗಿ ಮಾತನಾಡಿ, ಈ ಸಮಸ್ಯೆ ಬಗ್ಗೆ ಹಿಂದೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೆ ಪರಿಹಾರ ಸಿಗದಿರುವುದರಿಂದ ಸಾಂಕೇತಿಕ ಉಪವಾಸ ಸತ್ಯಾಗ್ರಹ ಮಾಡಲು ತೀರ್ಮಾನಿಸಿದ್ದೇವೆ. ನಮ್ಮ ಬೇಡಿಕೆ ಈಡೇರದಿದ್ದರೆ ಮುಂದೆ ಉಗ್ರ ಹೋರಾಟ ಮಾಡಲಿದ್ದೇವೆ ಎಂದರು.
ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಈ ಬಗ್ಗೆ ಮೌಖೀಕವಾಗಿ ತಿಳಿಸಿದ್ದು, ಮುಂದೆ ಅವರನ್ನು ಭೇಟಿಯಾಗಿ ಸಮಸ್ಯೆ ಬಗ್ಗೆ ವಿವರಿಸಲಾಗುವುದು ಎಂದರು. ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಮಾತನಾಡಿ, ರೈತರ ಸಂಘಟಿತ ಹೋರಾಟದಿಂದ ಯಶಸ್ಸು ಸಾಧ್ಯವಿದೆ. ನಿಮ್ಮ ಹೋರಾಟಕ್ಕೆ ರೈತ ಸಂಘ ಸಹಕಾರ ನೀಡಲಿದೆ ಎಂದರು.
ಹಿರಿಯ ಕೃಷಿಕ ಶಾನಾಡಿ ಶ್ರೀನಿವಾಸ ಭಟ್, ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಹೋರಾಟಕ್ಕೆ ಸಹಕಾರ ಘೋಷಿಸಿದರು.
Related Articles
Advertisement
ಜಿಲ್ಲಾಧಿಕಾರಿಗಳಿಂದ ಮನವಿ ಸ್ವೀಕಾರಪ್ರತಿಭಟನೆ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಜತೆಗೆ ಸ್ಥಳಕ್ಕಾಗಮಿಸಿ ಮನವಿ ಸ್ವೀಕರಿಸಿ ಮಾತನಾಡಿ, ರೈತರ ಬೇಡಿಕೆಯನ್ನು ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗುವುದು ಎಂದರು.