Advertisement

ಕೊರಗರು, ಗಿರಿ ಜನರು, ದಲಿತ ಬಂಧುಗಳು ಭಯ ಪಡುವ ಅವಶ್ಯಕತೆಯಿಲ್ಲ: ಕೋಟ ಶ್ರೀನಿವಾಸ್ ಪೂಜಾರಿ

11:05 AM Dec 31, 2021 | Team Udayavani |

ಬೆಂಗಳೂರು: ಕೊರಗರು, ಗಿರಿ ಜನರು, ದಲಿತ ಬಂಧುಗಳು ಭಯ ಪಡುವ ಅವಶ್ಯಕತೆಯಿಲ್ಲ. ನಾನು, ಗೃಹ ಸಚಿವರು, ಸರ್ಕಾರ ನಿಮ್ಮ ಜೊತೆಯಿದೆ. ಏನಾದರೂ ಇದ್ದರೆ ಸಿಎಂಗೂ ಮಾಹಿತಿ ನೀಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಕೋಟಾದಲ್ಲಿ ಗಿರಿಜನರ ಮೇಲೆ ಪೋಲಿಸರಿಂದ ವಿನಾಕಾರಣ ಹಲ್ಲೆ ಮಾಡಲಾಗಿತ್ತು. ಒಬ್ಬ ಪಿಎಸ್‌ಐ, ಸಸ್ಪೆಂಡ್ ಆರು ಜನರ ವರ್ಗಾವಣೆ ಕೂಡ ಮಾಡಲಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡಿದ್ದೆ. ಎಸ್‌ಪಿ ಮತ್ತು ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿದ್ದೆ. ಈ ಮಧ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು. ಒಬ್ಬ ಕಾನ್ಸ್‌ಟೇಬಲ್ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದಿವಾಸಿ ಕೇರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಪ್ರಕರಣದ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಅಲ್ಲಿರುವ ಪರಿಸ್ತಿತಿಯನ್ನು ಗೃಹಸಚಿವರಿಗೆ ವಿವರಿಸಿದ್ದೆ ಎಂದರು.

ಯಾವುದೇ ಕಾರಣಕ್ಕೂ ಅಲ್ಲಿರುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಎಸ್‌ಪಿ ಅವರಿಗೆ ಕರೆ ಮಾಡಿ ಪ್ರಕರಣದ ವಿಚಾರ ಕಾನೂನು ಪ್ರಕಾರ ದೂರು ದಾಖಲಿಸಲು ಸೂಚಿಸಿದ್ದಾರೆ. ದಲಿತರಿಗೆ ಯಾವುದೇ ತೊಂದರೆಯಾಗದಂತೆ ಗೃಹಸಚಿವರು ಸೂಚಿಸಿದ್ದಾರೆ ಎಂದರು.

ಇದನ್ನೂ ಓದಿ:ಭಾರತ: 24ಗಂಟೆಯಲ್ಲಿ 16,764 ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 1,270ಕ್ಕೆ ಏರಿಕೆ

ಸರ್ಕಾರದ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಹಸ್ತಾಂತರ ವಿಚಾರವಾಗಿ ಡಿಕೆಶಿ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ತಪ್ಪಿಸಿ ಭಕ್ತರ ಕೈಗೆ ನೀಡಬೇಕು ಎಂಬುದು ನಮ್ಮ ಚಿಂತನೆ. ಭಕ್ತರು ಅಂದರೆ ಬಿಜೆಪಿ, ಆರ್ಎಸ್ಎಸ್ ಕಾರ್ಯಕರ್ತರೂ ಆಗಿರಬಹುದು, ಡಿಕೆಶಿ ಶಿವಕುಮಾರ್ ಕೂಡ ಆಗಿರಬಹುದು. ಭಕ್ತರು ಅಂದರೆ ಎಲ್ಲರೂ ಬರುತ್ತಾರೆ.‌ನಾವು ಭಕ್ತರಿಗೆ ಕೊಡಬೇಕು ಅಂತ ಆಲೋಚಿಸಿದ್ದೇವೆ. ಇನ್ನೂ ಮಾರ್ಗಸೂಚಿ ಸಿದ್ಧಪಡಿಸಿಲ್ಲ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next