Advertisement
ಇದೇವೇಳೆ ಕಡಬ ತಹಶೀಲ್ದಾರ್ ಅವರು ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ ಮತ್ತು ಗರ್ಭಿಣಿಯ ಚಿಕಿತ್ಸೆ, ಆರೈಕೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.
ಪ್ರಕರಣದ ಬಗ್ಗೆ ತತ್‌ಕ್ಷಣ ತನಿಖೆ ನಡೆಸಿ ವರದಿ ನೀಡಲು ಆದೇಶಿಸಿದ ಸಚಿವರು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಬಿದ್ದರೆ ಅಮಾನತಿಗೂ ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದರು. ನೆಲ್ಯಾಡಿಯ ಮಹಿಳೆಗೆ ಕೂಡಲೇ ಅಗತ್ಯ ಚಿಕಿತ್ಸೆ ನೀಡಲು ಸೂಚಿಸಿದರು.
Related Articles
ಪ್ರಕರಣಕ್ಕೆ ಸಂಬಂಧಿಸಿ ಕಡಬ ತಹಶೀಲ್ದಾರ್ ಜಾನ್‌ಪ್ರಕಾಶ್ ರಾಡ್ರಿಗಸ್ ನೆಲ್ಯಾಡಿಯ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮಹಿಳೆಯನ್ನು ಸೋಮವಾರ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳ ಪಡಿಸಲಾಗಿದೆ. ಜ್ವರ ಕಡಿಮೆಯಾಗಿದ್ದು, ಆರೋಗ್ಯವಾಗಿದ್ದಾರೆ. ಮಹಿಳೆಗೆ ಅಗತ್ಯ ವೈದ್ಯಕೀಯ ನೆರವು ನೀಡಲು ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದರು.
Advertisement
ಕಂದಾಯ ನಿರೀಕ್ಷಕ ಅವಿನ್ ರಂಗತ್‌ಮಲೆ ಅವರು ಜತೆಗಿದ್ದರು.ಜಿಲ್ಲಾ ಉಸ್ತುವಾರಿ ಸಚಿವರ ಆದೇಶದಂತೆ ಪ್ರಕರಣದ ಕುರಿತು ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಉನ್ನತ ಮಟ್ಟದ ತನಿಖೆ ಈಗಾಗಲೇ ಆರಂಭಗೊಂಡಿದೆ. ಸಂತ್ರಸ್ತ ಮಹಿಳೆಯ ಮನೆಯವರಿಗೆ ಮಂಗಳವಾರ (ಜು. 21) ತನಿಖಾ ತಂಡದ ಮುಂದೆ ಹಾಜರಾಗಿ ಹೇಳಿಕೆ ನೀಡುವಂತೆ ಸೂಚಿಸಲಾಗಿದೆ. – ಡಾ| ರತ್ನಾಕರ್, ಪ್ರಭಾರ DHO, ಮಂಗಳೂರು