Advertisement
ಕೊರೊನಾ ನಿಯಂತ್ರಣ ಮತ್ತು ಚಿಕಿತ್ಸೆ ಕುರಿತು ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕಿನ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವರು ಶುಕ್ರವಾರ ಸಭೆ ನಡೆಸಿ, ಸೋಂಕು ನಿಯಂತ್ರಣಕ್ಕಾಗಿ ಜಾರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದನ್ನು ಉಲ್ಲಂಘಿಸಿದವರ ಮೇಲೆ ಕಠಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
Related Articles
Advertisement
ತಾಲೂಕು ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ 50 ಐಸಿಯು ಘಟಕಗಳನ್ನು ಸ್ಥಾಪಿಸಿ, ಚಿಕಿತ್ಸೆ ನೀಡಬೇಕು. ಇದರಿಂದಾಗಿ ಜಿಲ್ಲಾ ಮಟ್ಟದ ಕೋವಿಡ್ ಕೇಂದ್ರಗಳಲ್ಲಿನ ಒತ್ತಡ ಕಡಿಮೆ ಮಾಡಬಹುದು ಎಂದರು.ಶಾಸಕ ರಾಜೇಶ್ ನಾಯ್ಕ, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಜಿ. ಪಂ. ಸಿಇಒ ಡಾ| ಕುಮಾರ್, ಕುಟುಂಬ ಕಲ್ಯಾಣ ಅಧಿಕಾರಿ ಕಿಶೋರ್ ಉಪಸ್ಥಿತರಿದ್ದರು.
ಆ್ಯಂಬುಲೆನ್ಸ್ ಉಚಿತಕೊರೊನಾದಿಂದ ಮೃತ ಹೊಂದಿದವರ ಶವ ಸಾಗಿಸಲು ಉಚಿತ ಆ್ಯಂಬುಲೆನ್ಸ್ ನೀಡುವುದರ ಜತೆ ಶವ ಸಂಸ್ಕಾರದ ವೆಚ್ಚ ವನ್ನೂ ಸರಕಾರವೇ ಭರಿಸಲಿದ್ದು, ತಾಲೂಕಿನ ತಹಶೀಲ್ದಾರ್‌ಗಳಿಗೆ ಹಣ ಬಿಡುಗಡೆ ಮಾಡಿ ಎಂದು ಜಿಲ್ಲಾಧಿಕಾರಿಗೆ ಸಚಿವ ಶ್ರೀನಿವಾಸ ಪೂಜಾರಿ ಸೂಚಿಸಿದರು.