Advertisement

ಪರಿಶಿಷ್ಟ ಜಾತಿಯವರ ಮನೆ ನಿರ್ಮಾಣಕ್ಕೆ 5 ಲಕ್ಷ ಸಹಾಯಧನ ಹೆಚ್ಚಳಕ್ಕೆ ನಿರ್ಧಾರ : ಕೋಟ

07:51 PM Aug 09, 2021 | Team Udayavani |

ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಮನೆ ಕಟ್ಟಿಕೊಳ್ಳಲು ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧನವನ್ನು 1.75 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ ಮಾಡಲು ತೀರ್ಮಾಣಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Advertisement

ಸೋಮವಾರ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಥಮ ಸಭೆ ನಡೆಸಿ ನಂತರ ಮಾಧ್ಯಮಗಳೊಂದಗಿಎ ಮಾತನಾಡಿದ ಅವರು, ಇಂದು ಸಮಾಜ ಕಲ್ಯಾಣ ಇಲಾಖೆಯ ಪ್ರಥಮ ಸಭೆ ಕರೆದಿದ್ದೆ. ಸಭೆಯಲ್ಲಿ ಕೆಲವು ನಿರ್ಧಾರ ಮಾಡಲಾಗಿದೆ. ರಾಜ್ಯದಲ್ಲಿ 1 ಕೋಟಿ 20 ಲಕ್ಷ ಪರಿಶಿಷ್ಟ ಸಮಾಜ ಇದೆ. ಪರಿಶಿಷ್ಟ ಜಾತಿಯವರಿಗೆ ಮನೆ ಕಟ್ಟಲಿಕ್ಕೆ 1 ಲಕ್ಷದ 75 ಸಾವಿರ ರೂಪಾಯಿ ಮಾತ್ರ ನೀಡಲಾಗುತ್ತಿದೆ. ಹೀಗಾಗಿ ಮನೆ ನಿರ್ಮಿಸಲು ಆರ್ಥಿಕವಾಗಿ ತುಂಬಾ ಕಷ್ಟ ಇದೆ. ಎಲ್ಲ ಬಡವರಿಗೆ ಮನೆ, ಶೌಚಾಲಯ, ವಿದ್ಯುತ್‌ ಕಲ್ಪಿಸುವ ವ್ಯವಸ್ಥೆ ಆಗಬೇಕು. ಅಲ್ಲದೆ ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತೆ ಆರೋಗ್ಯ ಇರಬೇಕು. ಈ ಕಾರಣಕ್ಕೆ ಅವರಿಗೆ ಕೊಡಬೇಕಿರುವ ಮನೆಗಳನ್ನು 5 ಲಕ್ಷಕ್ಕೆ ಏರಿಸಬೇಕೆಂದು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಸಿಎಂ ಹಾಗೂ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳುಹಿಸಿದ್ದೇವೆ ಎಂದುರು.

ಇನ್ನು ಇಲಾಖೆಯಲ್ಲಿ ಒಂದು ವರ್ಷಗಳ ಕಾಲ ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಲು ನಿರ್ಧಾರ ಮಾಡಿದ್ದೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಇದನ್ನೂ ಓದಿ :

Advertisement

Udayavani is now on Telegram. Click here to join our channel and stay updated with the latest news.

Next