Advertisement

ಮನೆ-ನಿವೇಶನ ರಹಿತ ಪ.ಜಾತಿ ಕುಟುಂಬಗಳಿಗೆ ತ್ವರಿತ ನಿವೇಶನ ಹಂಚಿಕೆಗೆ ಕ್ರಮ : ಸಚಿವ ಕೋಟ

11:22 PM Apr 25, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮನೆ ನಿವೇಶನ ಹೊಂದಿರದ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಕುಟುಂಬಗಳ ಪಟ್ಟಿಮಾಡಿ ಅವರಿಗೆ ತ್ವರಿತವಾಗಿ ನಿವೇಶನಗಳನ್ನು ಒದಗಿಸಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ.

Advertisement

ರಾಜ್ಯಾದ್ಯಂತ ಪರಿಶಿಷ್ಟ ಜಾತಿಯ ಮನೆ ನಿವೇಶನ ರಹಿತ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಕುಟುಂಬಗಳಿಗೆ ಮನೆ ನಿವೇಶನಗಳನ್ನು ನೀಡಬೇಕು. ಆರಂಭಿಕವಾಗಿ ನಾಲ್ಕು ವಿಭಾಗಗಳಲ್ಲಿ ಅತೀ ಹೆಚ್ಚು ಜನಸಂಖ್ಯೆ ಇರುವ ನಾಲ್ಕು ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು ವಿಭಾಗದಲ್ಲಿ ಚಿತ್ರದುರ್ಗ, ಮೈಸೂರು ವಿಭಾಗದಲ್ಲಿ ಚಾಮರಾಜ ನಗರ, ಕಲಬುರಗಿ ವಿಭಾಗದಲ್ಲಿ ರಾಯಚೂರು ಮತ್ತು ಬೆಳಗಾವಿ ವಿಭಾಗದಲ್ಲಿ ಹಾವೇರಿ ಜಿಲ್ಲೆಯಲ್ಲಿ ಇದನ್ನು ಪೈಲಟ್‌ ಆಗಿ ಅನುಷ್ಠಾನಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ನಡೆದ ಸಭೆಯ ನಂತರ ಮಾತನಾಡಿ, ರಾಜ್ಯದಲ್ಲಿ ಒಟ್ಟು 5.46 ಲಕ್ಷ ಕುಟುಂಬಗಳು ಮನೆ ನಿವೇಶನ ಹೊಂದಿಲ್ಲ. ಅವರಿಗೆ ಭೂಮಿ ಕೊಡುವುದು ಸರಕಾರದ ಜವಾಬ್ದಾರಿ. ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಆದ್ಯತೆಯಲ್ಲಿ ಶೀಘ್ರ ಮನೆ ಒದಗಿಸಲು, ಆಯ್ದ ಜಿಲ್ಲೆಗಳಲ್ಲಿ ಸರಕಾರಿ ಭೂಮಿ ಲಭ್ಯತೆ, ಮನೆ ನಿವೇಶನ ರಹಿತ ಪರಿಶಿಷ್ಟ ಜಾತಿ ಸಮುದಾಯದ ಕುಟುಂಬಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಬಳಿಕ ಪ್ರತೀ ಜಿಲ್ಲೆಗೂ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.

ಇದನ್ನೂ ಓದಿ : ಶ್ರೀಮಂತಿಕೆಯಲ್ಲಿ ಬಫೆಟ್‌ರನ್ನು ಹಿಂದಿಕ್ಕಿದ ಅದಾನಿ : ಜಗತ್ತಿನ 5ನೇ ಸಿರಿವಂತ ವ್ಯಕ್ತಿ

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಸಲಹೆಗಾರ ನಿವೃತ್ತ ಅಧಿಕಾರಿ ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾ. ಮಣಿವಣ್ಣನ್‌ ಪಿ., ಆಯುಕ್ತ ರಾಕೇಶ್‌ ಕುಮಾರ್‌, ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ಬಸವರಾಜ…, ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತರ ಸಹಿತ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next