Advertisement
ಅವರು ಸೋಮವಾರ ದ.ಕ. ಜಿ.ಪಂ. ಸಭಾಂಗಣದಲ್ಲಿ ಇಲಾಖೆಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Related Articles
Advertisement
ಸಿಎಂ ಈಗಾಗಲೇ ಘೋಷಿಸಿದಂತೆ ಬಿಪಿಎಲ್ ಕಾರ್ಡ್ ಹೊಂದಿರುವ 24.5 ಲಕ್ಷ ಮಂದಿಗೆ 75 ಯುನಿಟ್ ವಿದ್ಯುತ್ ಉಚಿತವಾಗಿ ದೊರೆಯಲಿದೆ. ಈ ಮಹತ್ವಾಕಾಂಕ್ಷಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲೆಯ ಅಧಿಕಾರಿಗಳು ವಿಶೇಷ ಒತ್ತು ನೀಡಬೇಕು. ಅಲ್ಲದೆ ಪ. ಜಾತಿ ಮತ್ತು ಪ. ಪಂಗಡದವರನ್ನು ಸಂಪೂರ್ಣವಾಗಿ ಯಶಸ್ವಿನಿ ಯೋಜನೆಯಡಿ ಯಾವ ರೀತಿಯಾಗಿ ತರಲು ಸಾಧ್ಯ ಎಂಬ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ಅಂಗನವಾಡಿಯಿಂದ ಹೊರ ಗುಳಿಯದಂತೆ ಎಚ್ಚರ ವಹಿಸಬೇಕು. ಜಿಲ್ಲೆಯಲ್ಲಿ ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ, ಸ್ವಂತ ಕಟ್ಟಡಕ್ಕಾಗಿ ಜಾಗ ಗುರುತಿಸಬೇಕು. ಇಲಾಖೆ ಸೂಕ್ತ ನೆರವು ನೀಡಲು ಸಿದ್ಧವಿದೆ ಎಂದು ಸ.ಕ. ಇಲಾಖಾ ಆಯುಕ್ತ ಆಕಾಶ್ ಕುಮಾರ್ ತಿಳಿಸಿದರು.
ಹಿಂ.ವ. ಕಲ್ಯಾಣ ಇಲಾಖೆ ಆಯುಕ್ತ ಕೆ.ಎ. ದಯಾನಂದ, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಆಕಾಶ್ ಕುಮಾರ್, ಡಿಸಿ ಡಾ| ರಾಜೇಂದ್ರ ಕೆ.ವಿ., ಜಿ.ಪಂ. ಸಿಇಒ ಡಾ| ಕುಮಾರ್, ಅಪರ ಡಿಸಿ ಡಾ| ಕೃಷ್ಣಮೂರ್ತಿ, ಉಪಮೇಯರ್ ಸುಮಂಗಳಾ ರಾವ್ ಉಪಸ್ಥಿತರಿದ್ದರು.
ಕೇರಳಕ್ಕೆ ತಂಡಕೇರಳದಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ ಕುಚ್ಚಲಕ್ಕಿ ವಿತರಿಸಲಾಗುತ್ತಿದೆ. ಅಲ್ಲಿ ಯಾವ ರೀತಿ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂಬುದನ್ನು ತಿಳಿಯಲು ಆಹಾರ ಇಲಾಖಾ ಉಪನಿರ್ದೇಶಕರ ತಂಡದೊಂದಿಗೆ ಕೇರಳಕ್ಕೆ ಭೇಟಿ ನೀಡಲಾಗುವುದು. ಬಳಿಕ ರಾಜ್ಯದಲ್ಲಿಯೂ ಸಮರ್ಪಕ ಅನುಷ್ಠಾನವಾಗಲಿದೆ ಎಂದು ಸಚಿವ ಕೋಟ ವಿವರಿಸಿದರು.