Advertisement

ನಗರ ಪ್ರದೇಶಗಳಲ್ಲೂ ವಲಸೆ ಕಾರ್ಮಿಕರಿಗೆ ಊಟ: ಕೋಟ

10:28 AM Apr 19, 2020 | sudhir |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ನಗರ, ಪಟ್ಟಣ ಪ್ರದೇಶಗಳಲ್ಲಿ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರಿಗೆ, ನಿರ್ಗತಿಕರಿಗೆ, ಭಿಕ್ಷುಕರಿಗೆ ಆಯಾ ಸ್ಥಳೀಯ ಸಂಸ್ಥೆಗಳ ಮೂಲಕ ಊಟ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತು ವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಲಾಕೌಡೌನ್‌ನಿಂದಾಗಿ ಯಾರೂ ಹಸಿವಿನಿಂದ ಇರಬಾರದು. ಅಗತ್ಯ ಬಿದ್ದಲ್ಲಿ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರವನ್ನು ಪಡೆಯಬಹುದು ಎಂದು ಸಚಿವರು ತಿಳಿಸಿದರು.

ಆರೋಗ್ಯ ಇಲಾಖೆಯಿಂದ ಆಶಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರ ಮೂಲಕ ಆಯಾ ಪಟ್ಟಣ ವ್ಯಾಪ್ತಿಯಲ್ಲಿ ಮನೆಮನೆಗೆ ಭೇಟಿ ನೀಡಿ, ಪ್ರತೀ ಮನೆಯ ಸದಸ್ಯರ ಆರೋಗ್ಯ ಮಾಹಿತಿ ಪಡೆದು 10 ದಿನಗಳೊಳಗೆ ವರದಿ ಸಿದ್ಧಗೊಳಿಸುವಂತೆ ಸೂಚಿಸಿದರು.

ಕಟ್ಟಡ ಕಾರ್ಮಿಕರ ಖಾತೆಗೆ 2,000 ರೂ. ಜಮೆ
ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರಕಾರದಿಂದ 2,000 ರೂ. ನೆರವು ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 6,122 ಕಟ್ಟಡ ಕಾರ್ಮಿಕರ ಬ್ಯಾಂಕ್‌ ಖಾತೆಗಳಿಗೆ ಮೊದಲ ಹಂತದಲ್ಲಿ ಜಮಾ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next