Advertisement

ಕಾಂಗ್ರೆಸ್‌ ಆಡಳಿತದಲ್ಲಿ ನಡೆದ ಕೊಲೆಗಳಿಗೆ ಏನುತ್ತರ? ಸಚಿವ ಕೋಟ ಟೀಕೆ

12:30 PM Mar 03, 2022 | Team Udayavani |

ಉಡುಪಿ: ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷನ ಕೊಲೆ ವಿಚಾರವಾಗಿ ಕಾಂಗ್ರೆಸ್‌ ಪಕ್ಷದ ವರು ಬೇಜವಾಬ್ದಾರಿಯುತ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್‌ ಅಧಿಕಾರಾವಧಿ ಯಲ್ಲಿ ಹಿಂದು ಸಂಘಟನೆ ಹಾಗೂ ಬಿಜೆಪಿಯ 23 ಕಾರ್ಯಕರ್ತರ ಕೊಲೆ ಯಾಗಿತ್ತು. ಆಗ ಅವರ ಪ್ರತಿಕ್ರಿಯೆ ಏನಿತ್ತು ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Advertisement

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಂಗಳ ವಾರ ಸಾರ್ವಜನಿಕರು, ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹರ್ಷನ ಕುಟುಂಬಕ್ಕೆ ಯಾವುದೇ ಸಮಸ್ಯೆಯಾಗದಂತೆ ಸರಕಾರ, ಬಿಜೆಪಿ, ಹಿಂದೂ ಸಮಾಜ ನೋಡಿಕೊಂಡಿದೆ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಯಾರ್ಯಾರ ಮೇಲಿದ್ದ ಪ್ರಕರಣಗಳನ್ನು ವಾಪಸ್‌ ಪಡೆಯಲಾಗಿದೆ ಎಂಬುದು ತಿಳಿದಿದೆ. ಹರ್ಷನ ಕೊಲೆಯ ಆರೋಪಿಗೆ ಕಠಿನ ಶಿಕ್ಷೆಯಾಗಲಿದೆ ಎಂದರು.

ಕಾಂಗ್ರೆಸ್‌ನ ಮೇಕೆದಾಟು ಪಾದ ಯಾತ್ರೆಯು ರಾಜಕೀಯ ಯಾತ್ರೆಯಾ ಗಿದೆ. ಹಿಂದೊಮ್ಮೆ ಪಾದಯಾತ್ರೆ ಮಾಡಿ ಕೊರೊನಾ ವಿಸ್ತರಿಸಿದ್ದರು. ಕಾಂಗ್ರೆಸ್‌ ನಡಿಗೆ ಕೃಷ್ಣೆ ಕಡೆಗೆ ಎಂಬ ಪಾದಯಾತ್ರೆ ಎಲ್ಲಿಗೆ ಬಂದು ಮುಟ್ಟಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಮೇಕೆದಾಟು ವ್ಯಾಜ್ಯ ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ ರಾಜಕೀಯ ಆಟ ಆಡುತ್ತಿದ್ದಾರೆ. ಈ ಯೋಜನೆಗೆ ನಮ್ಮ ಸರಕಾರ ಬದ್ಧವಾಗಿದೆ ಎಂದರು.

ಹಾವೇರಿ ವಿದ್ಯಾರ್ಥಿ ನವೀನ್‌ ಅವರು ಉಕ್ರೇನ್‌ನಲ್ಲಿ ಶೆಲ್‌ ದಾಳಿಗೆ ಮೃತಪಟ್ಟಿರುವುದು ಅತೀವ ದುಃಖ ತಂದಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿ ಸಲಿ ಎಂದು ಸಂತಾಪ ಸೂಚಿಸಿದರು.

ಇದನ್ನೂ ಓದಿ : 401 ಬೀದಿ ನಾಯಿಗಳಿಗೆ ಲಸಿಕೆ, 383ಕ್ಕೆ ಸಂತಾನ ಶಕ್ತಿ ಹರಣ

Advertisement

ಕೇಂದ್ರ ಸರಕಾರ ಉಕ್ರೇನ್‌ನಲ್ಲಿ ರುವ ಭಾರತೀಯ ವಿದ್ಯಾರ್ಥಿಗಳನ್ನು ಕರೆತರುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ. ಅಲ್ಲದೆ, ಇದಕ್ಕಾಗಿ ನಾಲ್ಕು ಸಚಿವರನ್ನು ನಿಯೋಜನೆ ಮಾಡಲಾಗಿದೆ. ಪರಿಸ್ಥಿತಿಯನ್ನು ಸಮರ್ಥವಾಗಿ ಕೇಂದ್ರ ಸರಕಾರ ನಿಭಾಯಿಸುತ್ತಿದೆ ಎಂದರು.

ಸುಮಾರು ಎರಡು ಗಂಟೆಗಳ ಕಾಲ ಸಾರ್ವಜನಿಕರ ಹಾಗೂ ಪಕ್ಷದ ಕಾರ್ಯಕರ್ತರ ವಿವಿಧ ಅಹವಾಲು ಗಳನ್ನು ಸ್ವೀಕರಿಸಿ, ಸಮಸ್ಯೆಗೆ ಪರಿಹಾರ ಸೂಚಿಸುವ ಪ್ರಯತ್ನ ಮಾಡಿದರು. ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್‌, ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್‌ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್‌ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್‌, ಶ್ರೀಶ ನಾಯಕ್‌, ಸುಪ್ರಸಾದ್‌ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್‌, ಜಿಲ್ಲಾ ಪದಾಧಿಕಾರಿಗಳು, ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮುಖಂಡರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next