Advertisement
ಬುಧವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಪೊಲೀಸರ ಮೇಲೆ ಕೇಸರಿ ಶಾಲಿನ ಆರೋಪ ಮಾಡಿ ಹರಿಹಾಯ್ದು ಎಚ್ಚರಿಕೆ ನೀಡಿದ್ದಾರೆ. ಪೊಲೀಸರ ಖಾಸಗಿ ಜೀವನದ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ. ಚಿತ್ರದುರ್ಗ ಜಿಲ್ಲೆಯ ಶಿಕ್ಷಕರು ಮುಖ್ಯಮಂತ್ರಿಗಳ ಸಾಲದ ಬಗ್ಗೆ ಮಾತನಾಡಿದ್ದಕ್ಕೆ ಅಮಾನತು ಮಾಡಲಾಗಿದೆ. ಅದನ್ನು ಪುನರ್ ಪರಿಶೀಲಿಸಬೇಕು ಎಂದು ಹೇಳಿದರು.
ಸಿದ್ದರಾಮಯ್ಯ ಮತ್ತು ಡಿಕೆಶಿ ಶೇ. 40 ಕಮಿಷನ್ ಬಗ್ಗೆ ತನಿಖೆ ಮಾಡುವುದಾಗಿ ಹೇಳಿದ್ದಾರೆ. ಈ ತನಿಖೆಯನ್ನು ಮುಕ್ತವಾಗಿ ಸ್ವಾಗತಿಸುತ್ತೇನೆ. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಂತ್ರಿಯಾಗಿದ್ದ ನನ್ನಿಂದಲೇ ತನಿಖೆ ಆರಂಭವಾಗಲಿ. ಯಾವ ತನಿಖೆಯಲ್ಲಿ ಏನಾಗುತ್ತದೆ ನೋಡೋಣ ಎಂದು ಶ್ರೀನಿವಾಸ ಪೂಜಾರಿ ಹೇಳಿದರು. ಹಿಂದುತ್ವದ ಗುರಿ
ಸಾಮಾನ್ಯವಾಗಿ ಹಿಂದುತ್ವದ ವಿಚಾರ ಕಾಂಗ್ರೆಸ್‌ನ ಗುರಿ ಎಂಬುವುದು ನಮಗೆ ಅರ್ಥವಾಗಿದೆ. ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದೂಗಳಿಗೆ ಕಠಿನವಾಗಲಿವೆ. ಯಾರನ್ನೋ ಓಲೈಸಲು ಹಿಂದುತ್ವದ ಚಟುವಟಿಕೆಗಳನ್ನು ನಿಷೇಧ ಮಾಡುವ, ನೈತಿಕ ಪೊಲೀಸ್‌ಗಿರಿ ಆರೋಪ ಮಾಡಿ ಬಂಧಿಸುವ ಕೆಲಸ ಮುಂದೆ ನಡೆಯುತ್ತದೆ ಅಂತ ಅನಿಸುತ್ತದೆ. ಪ್ರಜಾಪ್ರಭುತ್ವದಲ್ಲಿ ವಿಪಕ್ಷವಾಗಿ ನಾವು ಜನಸಾಮಾನ್ಯರಿಗೆ ರಕ್ಷಣೆ ಕೊಡುತ್ತೇವೆ ಎಂದು ಶ್ರೀನಿವಾಸ ಪೂಜಾರಿ ಹೇಳಿದರು.