ಉಡುಪಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತಲೇ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಸುದ್ದಿಯೂ ಹರಡುತ್ತಿದೆ.
ಹಾಗಾದರೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಯಾರಾಗಬಹುದು ಎಂಬ ಕುರಿತು ಪಕ್ಷ ಮತ್ತು ಸಾರ್ವಜನಿಕರಲ್ಲಿ ಚರ್ಚೆ ಆರಂಭವಾಗಿದೆ. ಸಹಜವಾಗಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ದಕ್ಕುವ ಸಾಧ್ಯತೆ ಇದೆ.
ಉಡುಪಿಯ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಗೃಹ ಸಚಿವ ಜತೆಗೆ ಹಾವೇರಿ ಜಿಲ್ಲಾ ಉಸ್ತುವಾರಿಯೂ ಇದೆ. ಆದ್ದರಿಂದ ಅವರಿಗೆ ಉಡುಪಿ ಜಿಲ್ಲೆಯತ್ತ ಗಮನ ಕೊಡುವುದು ಕಷ್ಟಸಾಧ್ಯ. ಇದೇ ವೇಳೆ ಅಂಗಾರ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದರಿಂದ ಅವರಿಗೆ ದ.ಕ. ಜಿಲ್ಲಾ ಉಸ್ತುವಾರಿ ಪದವಿ ಸಿಗಬಹುದು. ಆಗ ಕೋಟ ಅವರನ್ನು
ಉಡುಪಿ ಜಿಲ್ಲೆಗೆ ಉಸ್ತುವಾರಿಯನ್ನಾಗಿ ಮಾಡುವ ಸಾಧ್ಯತೆಯಿದೆ. ಜತೆಗೆ ಚಿಕ್ಕಮಗಳೂರು ಜಿಲ್ಲೆಗೆ ಉಸ್ತುವಾರಿಯಾಗಿ ಅಂಗಾರ ಅಥವಾ ಶ್ರೀನಿವಾಸ ಪೂಜಾರಿ ಅವರಲ್ಲಿ ಒಬ್ಬರನ್ನು ನಿಯೋಜಿಸಲೂಬಹುದು.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಸಂಬಂಧಪಟ್ಟ ವಿಷಯವಾಗಿದೆ. ಪಕ್ಷ ಏನನ್ನು ಸೂಚಿಸಿದ್ದನ್ನು ಪಾಲಿಸುವುದು ನಮ್ಮ ಕರ್ತವ್ಯ.
– ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಮತ್ತು ಧಾರ್ಮಿಕ ದತ್ತಿ ಸಚಿವರು.