Advertisement
ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಿಜಯಪುರ ಜಿಲ್ಲೆಯ ರೈತಾಪಿ ವರ್ಗಕ್ಕೆ ಸಂಕಷ್ಟ ಎದುರಾಗಿದೆ. 11,500 ಎಕರೆ ರೈತರ ಭೂಮಿ ವಕ್ಫ್ ಬೋರ್ಡ್ ಸ್ವಾಧೀನಪಡಿಸಿಕೊಂಡಿದೆ. 1988ರಿಂದ 2018ರ ವರೆಗೂ ಪಹಣಿಯಲ್ಲಿ ರೈತರ ಹೆಸರು ಇತ್ತು. ಪಹಣಿ ವಕ್ಫ್ ಬೋರ್ಡ್ ಪಾಲಾಗಿದೆ. ಈ ಹಿಂದೆ ಕಾಂಗ್ರೆಸ್ ಸರಕಾರ ರೂಪಿಸಿದ್ದ ಕಾನೂನಿನಿಂದ ಇದೆಲ್ಲ ಸಾಧ್ಯವಾಗಿದೆ. ಒಮ್ಮೆ ವಕ್ಫ್ ಬೋರ್ಡ್ ಇದು ನಮ್ಮ ಆಸ್ತಿ ಎಂದು ಗೊತ್ತುಪಡಿಸಿದರೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಮೂಲಕ ಆ ಆಸ್ತಿಯನ್ನು ವಕ್ಫ್ ಬೋರ್ಡ್ಗೆ ನೀಡುವಂತೆ ಮಾಡಿದೆ. ಒಂದು ಸಮುದಾಯವನ್ನು ಓಲೈಸಲು ರಾಜ್ಯ ಸರಕಾರ ಹೀಗೆ ಮಾಡುತ್ತಿದೆ. ಜನರು ದಂಗೆ ಏಳುವುದೊಂದು ಬಾಕಿಯಿದೆ.
Related Articles
ರೈತರು ಒಂದು ತುಂಡು ಭೂಮಿ ಕಳೆದುಕೊಳ್ಳಬಾರದು. ಬಿಜೆಪಿ ಇದನ್ನು ಹೋರಾಟವಾಗಿ ಕೈಗೆತ್ತಿಕೊಳ್ಳುತ್ತದೆ. ತಪ್ಪು ಮಾಡಿದವರ ಮೇಲೆ ಸರಕಾರ ಏನು ಕ್ರಮ ತೆಗೆದುಕೊಂಡಿದೆ? ತತ್ಕ್ಷಣವೇ ರೈತರಿಗೆ ಭೂಮಿ ಹಿಂದಿರುಗಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
Advertisement
ಗ್ರಾ.ಪಂ.ಗಳಿಗೆ ಅಧಿಕಾರ ನೀಡಿ9/11 ಹಂಚಿಕೆಯ ಅಧಿಕಾರ ಈ ಹಿಂದೆ ಗ್ರಾಮ ಪಂಚಾಯತಿಗಳಿಗೆ ಇದ್ದವು. ಅದನ್ನು ಈಗ ಪ್ರಾಧಿಕಾರಕ್ಕೆ ನೀಡಲಾಗಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಸರಕಾರ ತತ್ಕ್ಷಣವೇ ಈ ಅಧಿಕಾರವನ್ನು ಪುನಃ ಗ್ರಾಮ ಪಂಚಾಯತಿಗಳಿಗೆ ನೀಡಬೇಕು ಎಂದು ಆಗ್ರಹಿಸಿದರು. ರೇಷನ್ ಕಾರ್ಡ್ ಪರಿಶೀಲನೆ ಕೈಬಿಡಿ
ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ ಕಡಿಮೆ ಮಾಡುವುದು ಅಥವಾ ಇನ್ನಾéವುದೋ ಉದ್ದೇಶದಿಂದ ಬಿಪಿಎಲ್ ಕಾರ್ಡ್ ಪರಿಶೀಲನೆಗೆ ಮುಂದಾಗಿರುವುದನ್ನು ಸರಕಾರ ತತ್ಕ್ಷಣ ನಿಲ್ಲಿಸಬೇಕು. ಬಿಪಿಎಲ್ ಕಾರ್ಡ್ ರದ್ದತಿಯಿಂದ ಕೇಂದ್ರ ಸರಕಾರದ ಅಕ್ಕಿ, ಆಯುಷ್ಮಾನ್ ಯೋಜನೆಯ ಫಲ ಅನೇಕರಿಗೆ ಸಿಗುವುದಿಲ್ಲ. ಸರಕಾರ ಇದರಿಂದ ಹಿಂದೆ ಸರಿಯದಿದ್ದರೆ ಬಿಜೆಪಿ ಜಿಲ್ಲಾಧಿಕಾರಿ ಕಚೇರಿ, ವಿಧಾನಸೌಧ ಮುತ್ತಿಗೆ ಹಾಕಲಿದೆ ಎಂದು ಎಚ್ಚರಿಕೆ ನೀಡಿದರು. ಬಿ.ಕೆ. ಹರಿಪ್ರಸಾದ್ ಕ್ಷಮೆ ಯಾಚಿಸಲಿ
ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಬಗ್ಗೆ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ನೀಡಿರುವ ಹೇಳಿಕೆ ಖಂಡನೀಯ. ಶ್ರೀಗಳ ಬಗ್ಗೆ ಲಘುವಾಗಿ ಮಾತನಾಡಿದ್ದು ಹಿಂದೂ ಸಮಾಜಕ್ಕೆ ನೋವು ತಂದಿದೆ. ಶ್ರೀಪಾದರು ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸಿದವರು, ಜನಾಂದೋಲನ ಮಾಡಿದವರು. ಶ್ರೀಪಾದರ ಬಗ್ಗೆ ಇಡೀ ರಾಷ್ಟ್ರದಲ್ಲಿಯೇ ವಿಶೇಷ ಗೌರವ ಇದೆ. ತತ್ಕ್ಷಣವೇ ಬಿ.ಕೆ. ಹರಿಪ್ರಸಾದ್ ಅವರು ಕ್ಷಮೆ ಕೇಳಬೇಕು ಎಂದವರು ಒತ್ತಾಯಿಸಿದರು.