Advertisement

ಕೋಟ ಅವಳಿ ಕೊಲೆ: ತನಿಖಾಧಿಕಾರಿ ಬದಲಿಸಲು ಎಸ್‌.ಪಿ.ಗೆ ಮನವಿ

02:31 AM May 04, 2019 | Sriram |

ಕೋಟ: ಕೋಟದ ಅವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಅಂತಿಮ ವರದಿಯಲ್ಲಿ ಹಲವು ಲೋಪದೋಷಗಳಿದ್ದು,ತಿದ್ದು ಪಡಿ ಮಾಡುವಂತೆ ಮನವಿ ಸಲ್ಲಿಸಿದರೂ ಪ್ರಯೋಜನ ಆಗಿಲ್ಲ. ಹೀಗಾಗಿ ಪ್ರಕರಣದ ತನಿಖಾಧಿಕಾರಿ ಮೇಲೆ ನಮಗೆ ನಂಬಿಕೆ ಇಲ್ಲ. ಆದ್ದರಿಂದ ಅವರನ್ನು ಬದಲಾಯಿಸಬೇಕು ಎಂದು ಕೊಲೆಯಾದ ಯುವಕರ ಮನೆಯವರು ಎಸ್‌ಪಿ ನಿಶಾ ಜೇಮ್ಸ್‌ ಅವರಿಗೆ ಮೇ 3ರಂದು ಮನವಿ ಸಲ್ಲಿಸಿದರು.

Advertisement

ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಲು ತನಿಖಾಧಿಕಾರಿಗಳನ್ನು ತತ್‌ಕ್ಷಣ ಬದಲಿಸಬೇಕು ಮತ್ತು ಕಾಲಂ 173/8ರಡಿ ಹೆಚ್ಚಿನ ತನಿಖೆ ನಡೆಸಬೇಕು. ಇಲ್ಲವಾದರೆ ಹೋರಾಟ ನಡೆಸುವುದಾಗಿ ಮನವಿಯಲ್ಲಿ ತಿಳಿಸಿದರು.

ನಿಷ್ಪಕ್ಷಪಾತ ತನಿಖೆ: ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ನಿಷ್ಪಕ್ಷಪಾತ ತನಿಖೆ ನಡೆದು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ತನಿಖಾಧಿಕಾರಿಗಳು ಇದುವರೆಗೆ ಯಾವುದೇ ಲೋಪದೋಷ ಮಾಡಿಲ್ಲ. ದೋಷಾರೋಪಣ ಪಟ್ಟಿ ಕುರಿತು ಅನುಮಾನಗಳಿದ್ದರೆ ಹೆಚ್ಚುವರಿ ವಿವರಗಳನ್ನು ಸಲ್ಲಿಸಲು ಅವಕಾಶವಿದೆ ಎಂದು ಎಸ್‌ಪಿ ಪ್ರತಿಕ್ರಿಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next