ಉಳ್ಳಾಲ: ನರೇಂದ್ರ ಮೋದಿ ಅವರು ಅಧಿಕಾರ ಚುಕ್ಕಾಣಿ ಹಿಡಿದ ಬಳಿಕ ಮಹಿಳಾ ಕಲ್ಯಾಣಕ್ಕಾಗಿ ಹಲವಾರು ಕಾರ್ಯ ಕ್ರಮ ಮುಖೇನ ಸಬಲೀಕರಣಕ್ಕೆ ಆದ್ಯತೆ ನೀಡಿದ್ದಾರೆ ಎಂದು ರಾಜ್ಯ ಬಿಜೆಪಿ ಸಹ ವಕ್ತಾರೆ ಸುಲೋಚನ ಜಿ.ಕೆ. ಭಟ್ ಹೇಳಿದರು.
ಮಂಗಳೂರು ವಿಧಾನಸಭಾ ಕ್ಷೇತ್ರದ ಕೋಟೆಕಾರ್ ಶಕ್ತಿ ಕೇಂದ್ರದ ಮಹಿಳಾ ಮೋರ್ಚಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಕ್ಷೇತ್ರಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಮಹಿಳಾ ಮೋರ್ಚಾದ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಪೂಜಾ ಪೈ, ನಗರ ಪಾಲಿಕೆ ಸದಸ್ಯೆ ರೂಪಾ ಬಂಗೇರ, ಜಿಲ್ಲಾ ಕಾರ್ಯದರ್ಶಿ ನಮಿತಾ ಶ್ಯಾಂ, ಜಿಲ್ಲಾ ಮಹಿಳಾ ಮೋರ್ಚ ಪ್ರ. ಕಾರ್ಯದರ್ಶಿ ರಾಜೀವಿ ಕೆಂಪುಮಣ್ಣು, ಕ್ಷೇತ್ರ ಪ್ರ.ಕಾರ್ಯದರ್ಶಿ ಮೋಹನ್ ರಾಜ್ ಕೆ.ಆರ್., ಜಿ.ಪಂ. ಸದಸ್ಯೆ ಧನಲಕ್ಷೀ ಗಟ್ಟಿ, ಕೋಟೆಕಾರ್ ಪಟ್ಟಣ ಪಂ.ಉಪಾಧ್ಯಕ್ಷೆ ಭಾರತಿ ಗಟ್ಟಿ, ಸೋಮೇಶ್ವರ ಗ್ರಾ. ಪಂ. ಉಪಾಧ್ಯಕ್ಷೆ ಸುಶೀಲಾ ನಾಯಕ್, ತಲಪಾಡಿ ಗ್ರಾ.ಪಂ. ಉಪಾಧ್ಯಕ್ಷೆ ಜಯಲಕ್ಷ್ಮೀ, ಮಾಜಿ ತಾ.ಪಂ. ಸದಸ್ಯೆ ಪುಷ್ಪಾಲತಾ ಶೆಟ್ಟಿ, ಉಪಸ್ಥಿತರಿದ್ದರು.
ಮಹಿಳಾ ಮೋರ್ಚಾ ಕ್ಷೇತ್ರಾಧ್ಯಕ್ಷೆ ರಮಣಿ ಸೋಮೇಶ್ವರ ಸ್ವಾಗತಿಸಿದರು. ಮಮತಾ ಮೋಹನ್ ರಾಜ್ ಕನೀರ್ ತೋಟ ವಂದಿಸಿದರು. ಕ್ಷೇತ್ರ ಉಪಾಧ್ಯಕ್ಷೆ ಜಯಶ್ರೀ ಕರ್ಕೇರ ನಿರೂಪಿಸಿದರು.