Advertisement

ಗೋಪಾಡಿ: ಕೊಡಲಿಯಿಂದ ಕೊಚ್ಚಿ ಮಗನಿಂದಲೇ ತಂದೆಯ ಕೊಲೆ

10:17 AM Mar 20, 2022 | Team Udayavani |

ಕುಂದಾಪುರ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಕೋಟೇಶ್ವರ ಸಮೀಪದ ಗೋಪಾಡಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.

Advertisement

ಗೋಪಾಡಿ ಗ್ರಾಮದ ಹಾಲಾಡಿ ಮನೆ ನಿವಾಸಿ ನರಸಿಂಹ ಮರಕಾಲ (74) ಕೊಲೆಯಾದವರು.

ಪುತ್ರ ರಾಘವೇಂದ್ರ (36) ಕೊಲೆ ಆರೋಪಿ. ಕೌಟುಂಬಿಕ ದ್ವೇಷದ ಹಿನ್ನೆಲೆಯಲ್ಲಿ ಮಗ ರಾಘವೇಂದ್ರ ಕೊಡಲಿಯಿಂದ ತಂದೆಯನ್ನು ಕೊಚ್ಚಿ ಕೊಲೆ ಮಾಡಿದ್ದಾರೆ.

ಇದನ್ನೂ ಓದಿ:ಬೈಕ್ ಮುಖಾಮುಖಿ: ಓರ್ವ ಸಾವು, ಮತ್ತಿಬ್ಬರಿಗೆ ಗಾಯ

Advertisement

ಸ್ಥಳಕ್ಕೆ ಕುಂದಾಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next