Advertisement

Koteshwara: ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಖಾದರ್‌, ಸೊರಕೆ ಭೇಟಿ

01:41 AM Dec 28, 2024 | Team Udayavani |

ಕೋಟೇಶ್ವರ: ಸ್ಪೀಕರ್‌ ಯು.ಟಿ.ಖಾದರ್‌ ಹಾಗೂ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಅವರು ಡಿ.27ರಂದು ರಾತ್ರಿ ಬೀಜಾಡಿಯಲ್ಲಿರುವ ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ತೆರಳಿ ಮೃತರ ತಾಯಿ ಚಂದು ಪೂಜಾರಿ, ಪತ್ನಿ ಮಂಜುಶ್ರೀ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Advertisement

ಈ ಸಂದರ್ಭ ಮಾತನಾಡಿದ ಖಾದರ್‌, ಅನೂಪ್‌ ಪೂಜಾರಿ ಬಗ್ಗೆ ಮುಖ್ಯಮಂತ್ರಿಗಳ ಜತೆಗೆ ಮಾತನಾಡಿದ್ದು, ಸರಕಾರದಿಂದ ಒದಗಿಸಬಹುದಾದ ಸವಲತ್ತು ಹಾಗೂ ಪರಿಹಾರ ನೀಡು ವುದಾಗಿ ಹೇಳಿದರು. ಮೃತರ ಪತ್ನಿ ಪದವೀಧರೆಯಾಗಿದ್ದು, ಅವರಿಗೆ ಸರಕಾರ ಕೆಲಸ ಕೊಡಿಸಬೇಕು ಎಂದು ಕುಂದಾಪುರ ಬಿಲ್ಲವ ಸಮಾಜದ ಅಧ್ಯಕ್ಷ ಅಶೋಕ ಪೂಜಾರಿ ಮನವಿ ಮಾಡಿದರು. ಈ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ಖಾದರ್‌ ಮತ್ತು ಸೊರಕೆ ಹೇಳಿದರು.

ದಿನೇಶ ಶೆಟ್ಟಿ ಮೊಳಹಳ್ಳಿ, ಮಲ್ಯಾಡಿ ಶಿವರಾಮ ಶೆಟ್ಟಿ, ಹರಿಪ್ರಸಾದ್‌ ಶೆಟ್ಟಿ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.
ಸ್ಮಾರಕ ರಚನೆಗೆ ಸಹಕಾರ ಬೀಜಾಡಿ ಕಡಲ ತೀರದಲ್ಲಿ ಅನೂಪ್‌ ಪೂಜಾರಿ ಅವರ ಸ್ಮಾರಕ ನಿರ್ಮಿಸಲು ಸಹಕಾರ ನೀಡುವುದಾಗಿ ಖಾದರ್‌ ಹೇಳಿದರು.

ಶಾಸಕ ಯಶ್‌ಪಾಲ್‌ ಸಹಾಯ
ಶಾಸಕ ಯಶ್‌ಪಾಲ್‌ ಅವರು ಕೂಡ ಹುತಾತ್ಮರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರಲ್ಲದೆ, ವೈಯಕ್ತಿಕವಾಗಿ 1 ಲ.ರೂ. ಸಹಾಯ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next