Advertisement

ಕೋತಲಕಟ್ಟೆ: ಲಾರಿ ಢಿಕ್ಕಿ; ಕಾರು ಜಖಂ

09:23 PM Apr 04, 2023 | Team Udayavani |

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ ಕೋತಲಕಟ್ಟೆಯಲ್ಲಿ ಕಾರಿಗೆ ಲಾರಿ ಢಿಕ್ಕಿ ಹೊಡೆದು ಕಾರು ಜಖಂಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರಿಗೆ ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಡಿವೈಡರ್‌ ಮೇಲೇರಿ, ಉಡುಪಿ – ಮಂಗಳೂರು ರಸ್ತೆಗೆ ಅಡ್ಡಲಾಗಿ ನಿಂತು ಬಿಟ್ಟಿದೆ.

Advertisement

ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next