Advertisement

ಅವಳಿ ಜಿಲ್ಲೆಯಲ್ಲಿ ಮೊಳಗಿದ ಕೋಟಿ ಕಂಠ ಗಾಯನ

04:53 PM Oct 29, 2022 | Team Udayavani |

ಚಾಮರಾಜನಗರ: ಕರ್ನಾಟಕ ರಾಜ್ಯೋತ್ಸವದ ಪೂರ್ವ ವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮ ಜಿಲ್ಲಾದ್ಯಂತ ಯಶಸ್ವಿಯಾಗಿ ನಡೆಯಿತು.

Advertisement

ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಹಯೋಗ ದೊಂದಿಗೆ ನನ್ನ ನಾಡು-ನನ್ನ ಹಾಡು ಎಂಬ ಶೀರ್ಷಿಕೆಯಡಿ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್‌ಕುಮಾರ್‌ ಜಿಲ್ಲಾ ರಂಗಮಂದಿರದ ಮುಂಭಾಗದಲ್ಲಿ ಆಯೋಜಿತ ವಾಗಿದ್ದ ಕಾರ್ಯಕ್ರಮದಲ್ಲಿ ಸಾವಿರಾರು ವಿದ್ಯಾರ್ಥಿ ಗಳು, ಜನಪ್ರತಿನಿಧಿಗಳು, ಕನ್ನಡಪರ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು, ಅಧಿಕಾರಿಗಳು, ಕಲಾವಿದರು, ಸಾರ್ವಜನಿಕರು ಪಾಲ್ಗೊಂಡು ಕನ್ನಡ ಗೀತೆಗಳನ್ನು ಮೊಳಗಿಸಿದರು.

ಈ ಮೂಲಕ ಕನ್ನಡ ನಾಡು, ನುಡಿ ಬಗೆಗಿನ ಪರಂಪರೆ ಸಾರಿದರು. ನಾಡಿನ ಶ್ರೇಷ್ಠ ಕವಿಗಳ ನಾಡು ನುಡಿಯ ಶ್ರೇಷ್ಠತೆಯನ್ನು ಸಾರುವ ನನ್ನ ನಾಡು-ನನ್ನ ಹಾಡು ಎಂಬ ಶೀರ್ಷಿಕೆಯಡಿ ಮೊದಲಿಗೆ ರಾಷ್ಟ್ರಕವಿ ಕುವೆಂಪುರವರ ನಾಡಗೀತೆ ಜಯಭಾರತ ಜನನಿಯ ತನುಜಾತೆ ಗೀತೆಯನ್ನು ಹಾಡಲಾಯಿತು.

ಬಳಿಕ ಹುಯಿಲಗೋಳ ನಾರಾಯಣರಾಯರ ಉದಯ ವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪುರವರ ಬಾರಿಸು ಕನ್ನಡ ಡಿಂಡಿಮವ, ಡಾ. ಡಿ.ಎಸ್‌. ಕರ್ಕಿರವರ ಹಚ್ಚೇವು ಕನ್ನಡದ ದೀಪ, ನಾಡೋಜ ಡಾ. ಚನ್ನವೀರ ಕಣವಿಯವರ ವಿಶ್ವವಿ ನೂತನ ವಿದ್ಯಾಚೇತನ ಹಾಗೂ ಡಾ. ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತೆಗಳ ಸಮೂಹ ಗಾಯನ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next